ಸಪ್ನ ಚೌದರಿ 
ದೇಶ

ಗಾಯಕಿ, ನೃತ್ಯಗಾರ್ತಿ ಸಪ್ನ ಚೌದರಿ ಬಿಜೆಪಿಗೆ ಸೇರ್ಪಡೆ

ಗಾಯಕಿ ಹಾಗೂ ನೃತ್ಯಗಾರ್ತಿ ಸಪ್ನ ಚೌದರಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ದೆಹಲಿ ಬಿಜೆಪಿ ಘಟಕದ ಅಧ್ಯಕ್ಷ ಮನೋಜ್ ತಿವಾರಿ ಅವರ ಸಮ್ಮುಖದಲ್ಲಿ ಇಂದು ಸಪ್ನ ಚೌದರಿ ಕಮಲ ಕೈ ಹಿಡಿದರು.

ನವದೆಹಲಿ: ಗಾಯಕಿ ಹಾಗೂ ನೃತ್ಯಗಾರ್ತಿ ಸಪ್ನ ಚೌದರಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ದೆಹಲಿ ಬಿಜೆಪಿ ಘಟಕದ ಅಧ್ಯಕ್ಷ ಮನೋಜ್ ತಿವಾರಿ ಅವರ ಸಮ್ಮುಖದಲ್ಲಿ ಇಂದು ಸಪ್ನ ಚೌದರಿ ಕಮಲ ಕೈ ಹಿಡಿದರು.
ಜವಹರ್  ಲಾಲ್ ನೆಹರೂ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ಸೇರುವ ಮೂಲಕ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನವನ್ನು ಬೆಂಬಲಿಸಿದ್ದಾರೆ. ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹ್ಹಾಣ್ , ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮ್ ಲಾಲ್ ಮತ್ತಿತರು ಉಪಸ್ಥಿತರಿದ್ದರು.
ಕಳೆದ ಮಾರ್ಚ್ ತಿಂಗಳಲ್ಲಿ ಸಪ್ನ ಚೌದರಿ  ಪ್ರಿಯಾಂಕಾ ಗಾಂಧಿ ಜೊತೆಗೆ ಇರುವ ಪೋಟೋವೊಂದನ್ನು ಉತ್ತರ ಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ರಾಜ್ ಬಬ್ಬರ್ ತಮ್ಮ  ಟ್ವೀಟರ್ ನಲ್ಲಿ ಹಾಕಿ ಸಪ್ನ ಚೌದರಿಯನ್ನು ಕಾಂಗ್ರೆಸ್ ಪಕ್ಷಕ್ಕೆ ಸ್ವಾಗತಿಸಿದ್ದರು. ಇದು ಇಡೀ ರಾಷ್ಟ್ರದ ಗಮನ ಸೆಳೆದಿತ್ತು. ಆದಾಗ್ಯೂ, ತಾನೂ ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತಿಲ್ಲ ಎಂದು ಸಪ್ನ ಚೌದರಿ ಸ್ಪಷ್ಪಪಡಿಸಿದ್ದರು.
ನಂತರ ಸಪ್ನ ಚೌದರಿಗೆ ಬೆಂಬಲ ನೀಡಿದ ಬಿಜೆಪಿ , ಹಳೆಯ ಪೋಟೋಗಳನ್ನು ಬಳಸಿಕೊಂಡು ಮಥುರಾದಲ್ಲಿ ಬಿಜೆಪಿ ಅಭ್ಯರ್ಥಿ ಹೇಮಾ ಮಾಲಿನಿ ವಿರುದ್ಧ ಸ್ಪರ್ಧಿಸಲಿದ್ದಾರೆ ಎಂದು ಕಾಂಗ್ರೆಸ್  ಸುಳ್ಳು ಪ್ರಚಾರ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿತ್ತು.
ಸೂಪರ್ ಸ್ಟಾರ್ ಸಪ್ನ ಚೌದರಿಯ ಹಳೆಯ ಪೋಟೋ ಬಳಸುವ ಮೂಲಕ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ ಎಂದು  ಸುಳ್ಳು ಸುದ್ದಿ ಹಬ್ಬಿಸಲಾಗಿತ್ತು. ಅದರಲ್ಲೂ ಪ್ರಿಯಾಂಕಾ ಗಾಂಧಿ ಅವರಿಂದ ಈ ಮಟ್ಟದ ಕೀಳುಮಟ್ಟದ ರಾಜಕೀಯವನ್ನು ನಿರೀಕ್ಷಿಸಿರಲಿಲ್ಲ ಎಂದು ಮನೋಜ್ ತಿವಾರಿ ಹೇಳಿದರು.ಸಪ್ನ ಚೌದರಿ ಬಿಜೆಪಿ ಸೇರ್ಪಡೆಗೆ ಅವರು ಸಂತಸ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್