ಉತ್ತರ ಪ್ರದೇಶದಲ್ಲಿ ಭೀಕರ ದುರಂತ: ಚರಂಡಿಗೆ ಉರುಳಿದ ಬಸ್, 29ಮಂದಿ ಸಾವು 
ದೇಶ

ಉತ್ತರ ಪ್ರದೇಶದಲ್ಲಿ ಭೀಕರ ದುರಂತ: ಚರಂಡಿಗೆ ಉರುಳಿದ ಬಸ್, 29ಮಂದಿ ಸಾವು

ಆಗ್ರಾದ ಯಮುನಾ ಎಕ್ಸ್‌ಪ್ರೆಸ್ ಹೈವೇನಲ್ಲಿ ಉತ್ತರ ಪ್ರದೇಶ ರಾಜ್ಯ ರಸ್ತೆ ಸಾರಿಗೆ ಬಸ್ ಚರಂಡಿಗೆ ಬಿದ್ದು 29 ಜನ ದಾರುಣ ಸಾವಿಗೀಡಾದ ಘಟನೆ ಇಂದು ಬೆಳಗಿನ ಜಾವ ನಡೆದಿದೆ. ಘಟನೆಯಲ್ಲಿ ಹಲವಾರು ಮಂದಿ ಗಾಯಗೊಂಡಿದ್ದಾರೆ.

ಆಗ್ರಾ: ಆಗ್ರಾದ ಯಮುನಾ ಎಕ್ಸ್‌ಪ್ರೆಸ್ ಹೈವೇನಲ್ಲಿ ಉತ್ತರ ಪ್ರದೇಶ ರಾಜ್ಯ ರಸ್ತೆ ಸಾರಿಗೆ ಬಸ್ ಚರಂಡಿಗೆ ಬಿದ್ದು 29 ಜನ ದಾರುಣ ಸಾವಿಗೀಡಾದ ಘಟನೆ ಇಂದು ಬೆಳಗಿನ ಜಾವ ನಡೆದಿದೆ. ಘಟನೆಯಲ್ಲಿ ಹಲವಾರು ಮಂದಿ ಗಾಯಗೊಂಡಿದ್ದಾರೆ.
ಅವಧ್ ಡಿಪೋಗೆ ಸೇರಿದ್ದ ಡಬಲ್ ಡೆಕ್ಕರ್ ಬಸ್ ಖನೌದಿಂದ ನವದೆಹಲಿಗೆ ಹೋಗುತ್ತಿತ್ತು.
ಪ್ರಾರಂಭಿಕ ವರದಿಗಳ ಅನುಸಾರ ಬಸ್ ಚರಂಡಿಗೆ ಬಿದ್ದಾಗ 50 ಪ್ರಯಾಣಿಕರು ಇದರು.ಸದ್ಯ ಪೋಲೀಸರು ಸ್ಥಳಕ್ಕಾಗಮಿಸಿದ್ದು ಬಸ್ ನಲ್ಲಿ ಸಿಲುಕಿರುವ ಪ್ರಯಾಣಿಕರನ್ನು ಹೊರತೆಗೆವ ಕಾರ್ಯ ನಡೆದಿದೆ.
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬಸ್ ಅಪಘಾತದಲ್ಲಿ ಮೃತಪಟ್ಟವರ ಬಗೆಗೆ  ಸಂತಾಪ ವ್ಯಕ್ತಪಡಿಸಿದ್ದಾರೆ ಮತ್ತು ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಜಿಲ್ಲಾ ಮ್ಯಾಜಿಸ್ಟ್ರೇಟ್ ಮತ್ತು ಹಿರಿಯ ಪೊಲೀಸ್ ವರಿಷ್ಠಾಧಿಕಾರಿಗೆ ನಿರ್ದೇಶನ ನೀಡಿದ್ದಾರೆ.
ಮೃತರ ಕುಟುಂಬಗಳಿಗೆ ಉತ್ತರ ಪ್ರದೇಶ ಸರ್ಕಾರ ತಲಾ ಐದು ಲಕ್ಷ ರು. ಪರಿಹಾರ ಘೋಷಣೆ ಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel