ಕುಲ್ಜಿತ್ ನಗರ್ 
ದೇಶ

ಎಐಸಿಸಿ ಕಾರ್ಯದರ್ಶಿ ಸ್ಥಾನಕ್ಕೆ ಕುಲ್ಜಿತ್ ನಗರ್ ರಾಜೀನಾಮೆ

ಪಂಜಾಬ್ ಕಾಂಗ್ರೆಸ್ ಶಾಸಕ ಕುಲ್ಜಿತ್ ನಗರ್ ಅವರು ಸೋಮವಾರ ಎಐಸಿಸಿ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

ಚಂಡೀಗಢ: ಪಂಜಾಬ್ ಕಾಂಗ್ರೆಸ್ ಶಾಸಕ ಕುಲ್ಜಿತ್ ನಗರ್ ಅವರು ಸೋಮವಾರ ಎಐಸಿಸಿ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ನಿರ್ಧಾರದಿಂದ ನನಗೆ ವೈಯಕ್ತಿವಾಗಿ ನೋವಾಗಿದೆ. ಹೀಗಾಗಿ ನಾನು ಎಐಸಿಸಿ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ನಗರ್ ತಿಳಿಸಿದ್ದಾರೆ.
ನಿಮ್ಮ ರಾಜೀನಾಮೆ ನಿರ್ಧಾರದಿಂದ ನನಗೆ ನೋವಾಗಿದೆ. ಲೋಕಸಭೆ ಚುನಾವಣೆಯ ಸೋಲಿಗೆ ನೀವು ಒಬ್ಬರೆ ಹೊಣೆಯಲ್ಲ. ಅದು ಸಾಮೂಹಿಕ ಜವಾಬ್ದಾರಿ. ಹೀಗಾಗಿ ನಾನೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ನಗರ್ ಅವರು ರಾಹುಲ್ ಗಾಂಧಿಗೆ ಕಳುಹಿಸಿದ ರಾಜೀನಾಮೆ ಪತ್ರದಲ್ಲಿ ಹೇಳಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಹೀನಾಯ ಸೋಲಿನ ಹೊಣೆ ಹೊತ್ತು ರಾಹುಲ್ ಗಾಂಧಿ ಅವರು ಜುಲೈ 3ರಂದು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆದರೆ ಇದುವರೆಗೂ ಅವರ ರಾಜೀನಾಮೆ ಅಂಗೀಕಾರವಾಗಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

'ಭಾರತೀಯನ ಮದುವೆಯಾದಾಕ್ಷಣ Indian ಆಗಲ್ಲ, ಬಾಂಗ್ಲಾದೇಶಿ ಪತ್ನಿಗೆ ಭಾರತ ಪ್ರವೇಶ ನಿರಾಕರಣೆ ಸರಿ ಇದೆ': ಹೈಕೋರ್ಟ್

CM ಡಿ.ಕೆ. ಶಿವಕುಮಾರ್‌ಗಾಗಿ IndiGo flight ಲೇಟ್? VVIP ಸಂಸ್ಕೃತಿ ವಿರುದ್ಧ ಪ್ರಯಾಣಿಕರ ಆಕ್ರೋಶ..!

ಬರಗಾಲದ ಬೆನ್ನಲ್ಲೇ ಬೆಲೆ ಏರಿಕೆ ಬರೆ: ಮಧ್ಯಮ ವರ್ಗದವರಿಗೆ ಆರ್ಥಿಕ ಹೊಡೆತ, ಅಕ್ಕಿ ದರ ಗಗನಕ್ಕೆ..!