ಪಿ. ರಾಜ್ ಗೋಪಾಲ್ 
ದೇಶ

ಶರವಣ ಭವನ ಹೋಟೆಲ್ ಮಾಲೀಕನಿಗೆ ಜೀವಾವಧಿ ಶಿಕ್ಷೆ: ಶರಣಾಗಲು ಹೆಚ್ಚಿನ ಕಾಲಾವಕಾಶ ನೀಡಲು ಸುಪ್ರೀಂ ನಕಾರ

ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಶರವಣ ಭವನ ಹೋಟೆಲ್ ಸಮೂಹದ ಮಾಲೀಕ ಪಿ.ರಾಜಗೋಪಾಲ್‌ ಅವರು ನ್ಯಾಯಾಲಯಕ್ಕೆ ...

ನವದೆಹಲಿ: ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಶರವಣ ಭವನ ಹೋಟೆಲ್ ಸಮೂಹದ ಮಾಲೀಕ ಪಿ.ರಾಜಗೋಪಾಲ್‌ ಅವರು ನ್ಯಾಯಾಲಯಕ್ಕೆ ಶರಣಾಗಲು ಹೆಚ್ಚಿನ ಕಾಲಾವಕಾಶ ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದೆ.
ಎನ್ ವಿ ರಾಮಣ್ಣ  ನೇತೃತ್ವದ ಪೀಠ  ಶರವಣ ಭವನ ಮಾಲಿಕ  ರಾಜಗೋಪಾಲ್ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕಿರಿಸಿದ್ದಾರೆ, 2001 ರಲ್ಲಿ ನಡೆದಿದ್ದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷಗೆ ಗುರಿಯಾಗಿರುವ ರಾಜಾ ಗೋಪಾಲ್ ಜುಲೈ 7 ರಂದು ಕೋರ್ಟ್ ಗೆ ಶರಣಾಗಬೇಕಿತ್ತು  ಆದರೆ ಆತ ಶರಣಾಗಿರಲಿಲ್ಲ.
ಕಳೆದ ಕೆಲವು ದಿನಗಳಿಂದ ಇಲ್ಲಿನ ಅಶೋಕನಗರದ ಮನೆಯಲ್ಲಿ ವಾಸವಿದ್ದ ರಾಜಗೋಪಾಲ್‌ ಗುರುವಾರ ಆಸ್ಪತ್ರೆಗೆ ದಾಖಲಾಗಿದ್ದರು. ಅನಾರೋಗ್ಯದ ಕಾರಣ ಹೇಳಿಯೇ ಅವರು ತಮ್ಮ ಶರಣಾಗತಿಯನ್ನು ಅವಧಿಯನ್ನು ವಿಸ್ತರಿಸಲು ಸುಪ್ರೀಂಕೋರ್ಟ್‌ಗೆ ಮನವಿ ಸಲ್ಲಿಸಿದ್ದರು.
.
ತನ್ನ ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದ ನೌಕರನ ಹೆಂಡತಿಯನ್ನು ಮದುವೆಯಾಗುವ ದುರುದ್ದೇಶದಿಂದ 2001ರ ಅಕ್ಟೋಬರ್‌ನಲ್ಲಿ ನೌಕರನನ್ನು ಅಪಹರಿಸಿ ಕೊಲೆ ಮಾಡಿದ್ದ ಶರವಣ ಭವನ ಹೋಟೆಲ್ ಸಮೂಹದ ಮಾಲೀಕ ಪಿ.ರಾಜಗೋಪಾಲ್‌ಗೆ ಮದ್ರಾಸ್ ಹೈಕೋರ್ಟ್‌ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು ಸುಪ್ರೀಂಕೋರ್ಟ್‌ ಎತ್ತಿಹಿಡಿದು, ಜುಲೈ 7ರ ಒಳಗೆ ಶರಣಾಗಬೇಕು ಎಂದು ಸೂಚಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

SCROLL FOR NEXT