ದೇಶ

ಅಯೋಧ್ಯೆ ವಿವಾದ: ವಾರದೊಳಗೆ ಸಂಧಾನ ಪ್ರಗತಿಯ ಸ್ಥಿತಿಗತಿ ವರದಿ ಸಲ್ಲಿಸುವಂತೆ ಸುಪ್ರೀಂ ಸೂಚನೆ

Srinivasamurthy VN
ನವದೆಹಲಿ: ಅಯೋಧ್ಯೆ ಭೂ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದು ವಾರದೊಳಗೆ ಸಂಧಾನ ಪ್ರಗತಿಯ ಸ್ಥಿತಿಗತಿ ವರದಿ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ತಾನು ರಚಿಸಿರುವ ಸಂಧಾನ ಸಮಿತಿಗೆ ಗುರುವಾರ ಸೂಚನೆ ನೀಡಿದೆ.
ಸುಪ್ರೀಂ ಕೋರ್ಟ್ ಪಂಚ ಸದಸ್ಯ ಪೀಠ ಅಯೋಧ್ಯೆ ಭೂವಿವಾದ ಪ್ರಕರಣದ ವಿಚಾರಣೆ ನಡೆಸಿತು. ಈ ವೇಳೆ ಮುಖ್ಯ ನ್ಯಾಯಮೂರ್ತಿ ರಂಜನ್ ಗಗೋಯ್ ನೇತೃತ್ವದ ಪೀಠ ನಿವೃತ್ತ ನ್ಯಾಯಮೂರ್ತಿ ಖಲೀಫುಲ್ಲಾ ನೇತೃತ್ವದ ತ್ರಿಸದಸ್ಯ ಸಂಧಾನ ಸಮಿತಿಗೆ, ಸಂಧಾನ ಪ್ರಕ್ರಿಯೆಯ ಸ್ಥಿತಿಗತಿ ವರದಿ ಸಲ್ಲಿಸುವಂತೆ ಸೂಚನೆ ನೀಡಿದೆ. ಮುಂಬರುವ ಜುಲೈ 18ರೊಳಗೆ ವರದಿ ಸಲ್ಲಿಸುವಂತೆ ಸೂಚನೆ ನೀಡಲಾಗಿದ್ದು, ಅದೇ ದಿನಕ್ಕೆ ವಿಚಾರಣೆಯನ್ನು ನ್ಯಾಯಾಲಯ ಮುಂದೂಡಿದೆ.
ಅಂತೆಯೇ ಸುಪ್ರೀಂ ಕೋರ್ಟ್ ಗೆ ಪ್ರಸ್ತುತ ಸಲ್ಲಿಸಲಾಗಿರುವ ಹಾಲಿ ಸ್ಥಿತಿಗತಿ ವರದಿ ಕುರಿತು ಪ್ರಸ್ತಾಪಿಸಿದ ಕೋರ್ಟ್, ಪ್ರಸ್ತುತ ವರದಿಯ ಮೇರೆ ಯಾವುದೇ ನಿರ್ಧಾರಕ್ಕೆ ಬರಲು ಸಾಧ್ಯವಿಲ್ಲ. ಹೀಗಾಗಿ ಜುಲೈ 25ರವರೆಗೂ ಕೋರ್ಟ್ ದಿನಂ ಪ್ರತಿಯ ಸಂಧಾನ ಪ್ರಕ್ರಿಯೆಯನ್ನು ಪರಿಶೀಲಿಸುತ್ತದೆ ಎಂದು ಹೇಳಿದೆ.
SCROLL FOR NEXT