ದೇಶ

ಬಹುಕೋಟಿ ಮೇವು ಹಗರಣ: ಲಾಲು ಪ್ರಸಾದ್ ಯಾದವ್ ಗೆ ಜಾಮೀನು

Lingaraj Badiger
ನವದೆಹಲಿ: ಬಹುಕೋಟಿ ಮೇವು ಹಗರಣದಲ್ಲಿ ಜೈಲು ಪಾಲಾಗಿರುವ ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರಿಗೆ ಜಾರ್ಖಂಡ್ ಹೈಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದೆ. 
ಆರೋಗ್ಯ ಸಮಸ್ಯೆ ಮತ್ತು ವಯಸ್ಸಿನ ಹಿನ್ನೆಲೆಯಲ್ಲಿ ಜಾಮೀನು ಕೋರಿ ಲಾಲು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್, ದಿಯೋಘರ್ ಖಜಾನೆಯಿಂದ ಹಣ ಡ್ರಾ ಮಾಡಿದ ಪ್ರಕರಣದಲ್ಲಿ ಜಾಮೀನು ನೀಡಿದೆ. ಆದರೆ ಅವರು ಇತರೆ ಎರಡು ಪ್ರಕರಣದಲ್ಲಿ ಶಿಕ್ಷೆ ಅನುಭವಿಸುತ್ತಿರುವುದರಿಂದ ಬಿಡುಗಡೆ ಭಾಗ್ಯ ಇಲ್ಲ.
ಲಾಲೂ ಪ್ರಸಾದ್ ಯಾದವ್ ಬಿಹಾರದ ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ನಡೆದಿದ್ದ ಮೇವು ಹಗರಣದ ನಾಲ್ಕು ಪ್ರಕರಣಗಳಲ್ಲಿ ಈಗಾಗಲೇ ಯಾದವ್ ಅವರನ್ನು ದೋಷಿ ಎಂದು ಪರಿಗಣಿಸಲಾಗಿದ್ದು, ಅವರಿಗೆ ನಾಲ್ಕು ಪ್ರಕರಣಗಳಿಂದ ಒಟ್ಟು 20.5 ವರ್ಷ ಜೈಲುಶಿಕ್ಷೆ ವಿಧಿಸಲಾಗಿತ್ತು.
ದಿಯೋಘರ್ ಖಜಾನೆಯಿಂದ ಹಣ ಡ್ರಾ ಮಾಡಿದ ಪ್ರಕರಣದಲ್ಲಿ ಲಾಲೂ ಪ್ರಸಾದ್ ಯಾದವ್ ಅವರಿಗೆ 3.5 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಲಾಗಿದೆ.
ಅನಾರೋಗ್ಯದಿಂದ ಬಳಲುತ್ತಿರುವ ಲಾಲೂ ಪ್ರಸಾದ್ ಯಾದವ್ ಅವರು ಸದ್ಯ ರಾಂಚಿಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
SCROLL FOR NEXT