ದೇಶ

ಪರೀಕ್ಷಾ ಕೊಠಡಿಯಲ್ಲಿ ವಿದ್ಯಾರ್ಥಿಗಳ ತಪಾಸಣೆ: ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

Sumana Upadhyaya
ನವದೆಹಲಿ: ಪರೀಕ್ಷಾ ಸಭಾಂಗಣದಲ್ಲಿ ವಿದ್ಯಾರ್ಥಿಗಳನ್ನು ತಪಾಸಣೆ ಮಾಡುವ ಪರೀಕ್ಷಕರು ಮತ್ತು ಫ್ಲೈಯಿಂಗ್ ಸ್ಕ್ವಾಡ್ ಗಳಿಗೆ ಮಾರ್ಗಸೂಚಿಗೆ ಆದೇಶ ಹೊರಡಿಸಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಳ್ಳಿಹಾಕಿದೆ.
ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ಮೂವರು ನ್ಯಾಯಾಧೀಶರನ್ನೊಳಗೊಂಡ ನ್ಯಾಯಪೀಠ, ಅಡ್ವೊಕೇಟ್ ಅನುಜ ಕಪೂರ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಇಂದು ನಡೆಸಿತು.
ಕೇಸಿನಲ್ಲಿ ಯಾವುದೇ ರೀತಿಯ ಪರಿಹಾರ ಸಿಗಬೇಕೆಂದರೆ ದೆಹಲಿ ಹೈಕೋರ್ಟ್ ಮೊರೆ ಹೋಗುವಂತೆ ನ್ಯಾಯಪೀಠ ಅವರಿಗೆ ಸೂಚಿಸಿದೆ. 
ಛತ್ತೀಸ್ ಗಢದಲ್ಲಿ 10ನೇ ತರಗತಿ ಓದುತ್ತಿದ್ದ ಹುಡುಗಿಯೊಬ್ಬಳ ಮೇಲೆ ಬೋರ್ಡ್ ಪರೀಕ್ಷೆ ದಿನ ಪರೀಕ್ಷಾ ಕೊಠಡಿಯಲ್ಲಿ ತಪಾಸಣೆ ನೆಪದಲ್ಲಿ ಬಟ್ಟೆ ಕಳಚುವಂತೆ ಹೇಳಿ ಅವಮಾನವಾಗಿದ್ದರಿಂದ ಆತ್ಮಹತ್ಯೆ ಮಾಡಿಕೊಂಡಿದ್ದಳು ಎಂದು ಅಡ್ವೊಕೇಟ್ ಅನುಜ ಕಪೂರ್ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.
SCROLL FOR NEXT