ದೇಶ

ದೀದಿಗೆ ಢವಢವ: ಟಿಎಂಸಿ, ಕಾಂಗ್ರೆಸ್, ಸಿಪಿಎಂನ 107 ಶಾಸಕರು ಬಿಜೆಪಿ ಸೇರ್ಪಡೆ?

Vishwanath S
ಕೋಲ್ಕತ್ತಾ: ಲೋಕಸಭೆ ಚುನಾವಣೆಯ ಫಲಿತಾಂಶದ ಬಳಿಕ ಸೋತು ಸುಣ್ಣವಾಗಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಢವಢವ ಶುರುವಾಗಿದೆ. ಹೌದು ಟಿಎಂಸಿ, ಕಾಂಗ್ರೆಸ್, ಸಿಪಿಎಂಗೆ ಸೇರಿದ 107 ಶಾಸಕರು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ಬಿಜೆಪಿ ಹೇಳಿದೆ.
ಪಶ್ಚಿಮ ಬಂಗಾಳದ ಹಿರಿಯ ಮುಖಂಡ ಮುಕುಲ್ ರಾಯ್ ಅವರು ಈ ವಿಚಾರವನ್ನು ಪ್ರಸ್ತಾಪಿಸಿದ್ದು ರಾಜಕೀಯ ವಲಯದಲ್ಲಿ ಬಿರುಗಾಳಿ ಎಬ್ಬಿಸಿದೆ. ಬಿಜೆಪಿಗೆ ಸೇರ್ಪಡೆಗೊಳ್ಳಲಿರುವ ಶಾಸಕರ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ ಮತ್ತು ಶಾಸಕರು ರಾಜ್ಯ ಬಿಜೆಪಿ ನಾಯಕರ ಜೊತೆ ಸಂಪರ್ಕದಲ್ಲಿದ್ದಾರೆ ಎಂದು ಹೇಳಿದ್ದರು. 
2016ರಲ್ಲಿ ನಡೆದ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ 294 ಕ್ಷೇತ್ರಗಳ ಪೈಕಿ ತೃಣಮೂಲ ಕಾಂಗ್ರೆಸ್ 211 ಸ್ಥಾನಗಳಲ್ಲಿ ಗೆಲುವು ಸಾಧಿಸಿ ಸರ್ಕಾರ ರಚಿಸಿದೆ. 
ಇತ್ತೀಚೆಗಷ್ಟೇ ಗೋವಾದಲ್ಲಿ 10 ಶಾಸಕರು ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದರು. ಇದರ ಬೆನ್ನಲ್ಲೇ ಇದೀಗ ಮುಕುಲ್ ರಾಯ್ ಅವರು ಈ ಹೇಳಿಕೆ ದೀದಿಯ ಆತಂಕಕ್ಕೆ ಕಾರಣವಾಗಿದೆ. 
SCROLL FOR NEXT