ಸಂಪರ್ಕ ಸಮರ್ಥನ್ ಕಾರ್ಯಕ್ರಮದ ವೇಳೆ ಬಿಜೆಪಿಯ ಅಂದಿನ ಅಧ್ಯಕ್ಷ ಅಮಿತ್ ಶಾರಿಂದ ಎಂಎಸ್ ಧೋನಿ ಭೇಟಿ 
ದೇಶ

ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಬಳಿಕ ಎಂ ಎಸ್ ಧೋನಿ ಬಿಜೆಪಿ ಸೇರಬಹುದು: ಮಾಜಿ ಸಚಿವ ಸಂಜಯ್ ಪಾಸ್ವಾನ್

ಕ್ರಿಕೆಟ್ ನಿಂದ ನಿವೃತ್ತಿ ಪಡೆದ ಬಳಿಕ ಖ್ಯಾತ ಕ್ರಿಕೆಟಿಗ ಮಹೇಂದ್ರ ಸಿಂಗ್ ಧೋನಿ ಭಾರತೀಯ ಜನತಾ ...

ನವದೆಹಲಿ: ಕ್ರಿಕೆಟ್ ನಿಂದ ನಿವೃತ್ತಿ ಪಡೆದ ಬಳಿಕ ಖ್ಯಾತ ಕ್ರಿಕೆಟಿಗ ಮಹೇಂದ್ರ ಸಿಂಗ್ ಧೋನಿ ಭಾರತೀಯ ಜನತಾ ಪಕ್ಷವನ್ನು ಸೇರಿ ರಾಜಕೀಯದಲ್ಲಿ ತಮ್ಮ ಹೊಸ ಇನ್ನಿಂಗ್ಸ್ ಆರಂಭಿಸಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.
ಈ ಕುರಿತು ಐಎಎನ್ಎಸ್ ಜೊತೆ ಮಾತನಾಡಿದ ಕೇಂದ್ರದ ಮಾಜಿ ಸಚಿವ, ಬಿಜೆಪಿ ನಾಯಕ ಸಂಜಯ್ ಪಾಸ್ವಾನ್ ಧೋನಿಯವರು ಬಿಜೆಪಿ ಸೇರುವ ಬಗ್ಗೆ ಹಲವು ಸಮಯಗಳಿಂದ ಮಾತುಕತೆ ನಡೆಯುತ್ತಿದೆ. ಅವರು ಕ್ರಿಕೆಟ್ ನಿಂದ  ನಿವೃತ್ತಿ ಹೊಂದಿದ ಬಳಿಕವಷ್ಟೆ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಬಹುದು ಎಂದರು.
ಧೋನಿ ನನ್ನ ಸ್ನೇಹಿತ, ವಿಶ್ವಮಟ್ಟದ ಆಟಗಾರ, ಅವರನ್ನು ಭಾರತೀಯ ಜನತಾ ಪಕ್ಷಕ್ಕೆ ಕರೆತರುವ ಬಗ್ಗೆ ಮಾತುಕತೆಗಳು ನಡೆಯುತ್ತಿವೆ ಎಂದರು.
ಕಳೆದ ಬಾರಿ ಲೋಕಸಭೆ ಚುನಾವಣೆಗೆ ಮುನ್ನ ಬಿಜೆಪಿಯ ಸಂಪರ್ಕ ಸಮರ್ಥನ ಅಭಿಯಾನದ ವೇಳೆ ಗೃಹ ಸಚಿವ ಅಮಿತ್ ಶಾ ಧೋನಿಯನ್ನು ಭೇಟಿ ಮಾಡಿದ್ದರು. 
ಈ ವರ್ಷದ ಅಂತ್ಯದಲ್ಲಿ ಜಾರ್ಖಂಡ್ ವಿಧಾನಸಭೆ ಚುನಾವಣೆ ನಡೆಯಲಿದೆ. ಆ ವೇಳೆ ಧೋನಿಯನ್ನು ಜಾರ್ಖಂಡ್ ನ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಕೂಡ ಬಿಜೆಪಿ ಸೂಚಿಸಬಹುದು ಎಂಬ ಮಾತುಗಳು ಕೂಡ ಹರಿದಾಡುತ್ತಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ