ದೇಶ

ರಾಜ್ಯಸಭಾ ಸ್ಥಾನಕ್ಕೆ ಸಮಾಜವಾದಿ ಪಕ್ಷದ ನಾಯಕ ನೀರಜ್ ಶೇಖರ್ ರಾಜೀನಾಮೆ, ಬಿಜೆಪಿ ಸೇರುವ ಸಾಧ್ಯತೆ

Lingaraj Badiger
ನವದೆಹಲಿ: ಸಮಾಜವಾದಿ ಪಕ್ಷದ ಸಂಸದ ಮತ್ತು ಮಾಜಿ ಪ್ರಧಾನಿ ದಿವಗಂತ ಚಂದ್ರಶೇಖರ್ ಅವರ ಪುತ್ರ ನೀರಜ್ ಶೇಖರ್ ಅವರು ಸೋಮವಾರ ರಾಜ್ಯಸಭೆಯ ತಮ್ಮ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಸಭಾಪತಿ ಎಂ.ವೆಂಕಯ್ಯ ನಾಯ್ಡು ಅವರು ಶೇಖರ್ ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
2019ರ ಲೋಕಸಭಾ ಚುನಾವಣೆಯಲ್ಲಿ ತಮ್ಮ ಕುಟುಂಬದ ಸಾಂಪ್ರದಾಯಿಕ ಸ್ಥಾನವಾದ ಬಾಲಿಯಾ ಕ್ಷೇತ್ರದಿಂದ ಟಿಕೆಟ್ ನಿರಾಕರಿಸಿದ್ದರಿಂದ ಶೇಖರ್ ಅವರು ಪಕ್ಷದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು.
2007ರಲ್ಲಿ, ನೀರಜ್ ಶೇಖರ್ ಅವರು ತಮ್ಮ ತಂದೆಯ ನಿಧನದಿಂದ ತೆರವಾಗಿದ್ದ ಬಾಲಿಯಾ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾಗಿದ್ದರು. ಈಗ ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿರುವ ನೀರಜ್ ಶೇಖರ್ ಅವರು ಬಿಜೆಪಿಗೆ ಸೇರುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
SCROLL FOR NEXT