ಕಟ್ಟಡ ಕುಸಿತದಡಿ ರಕ್ಷಣಾ ಕಾರ್ಯಾಚರಣೆ ದೃಶ್ಯಗಳು 
ದೇಶ

ಮುಂಬೈಯಲ್ಲಿ 4 ಹಂತದ ಕಟ್ಟಡ ಕುಸಿತ: ಇಬ್ಬರು ಸಾವು, ಐವರ ರಕ್ಷಣೆ

ದಕ್ಷಿಣ ಮುಂಬೈಯ ಡೊಂಗ್ರಿ ಪ್ರದೇಶದಲ್ಲಿ 4 ಹಂತದ ಕಟ್ಟಡ ಕುಸಿದು ಬಿದ್ದು ಇಬ್ಬರು ಮೃತಪಟ್ಟಿದ್ದಾರೆ...

ಮುಂಬೈ: ದಕ್ಷಿಣ ಮುಂಬೈಯ ಡೊಂಗ್ರಿ ಪ್ರದೇಶದಲ್ಲಿ 4 ಹಂತದ ಕಟ್ಟಡ ಕುಸಿದು ಬಿದ್ದು ಇಬ್ಬರು ಮೃತಪಟ್ಟಿದ್ದಾರೆ. ಇದುವರೆಗೆ ನಡೆದ ರಕ್ಷಣಾ ಕಾರ್ಯಾಚರಣೆಯಲ್ಲಿ ಐವರನ್ನು ರಕ್ಷಿಸಲಾಗಿದೆ. 40 ರಿಂದ 50 ಮಂದಿ ಅವಶೇಷಗಳಡಿಯಲ್ಲಿ ಸಿಲುಕಿಕೊಂಡಿರಬಹುದು ಎಂದು ಶಂಕೆ ವ್ಯಕ್ತಪಡಿಸಲಾಗಿದೆ.

ಎಎನ್ಐ ಸುದ್ದಿ ಸಂಸ್ಥೆಗೆ ಮಾಹಿತಿ ನೀಡಿದ ಬೃಹನ್ ಮುಂಬೈ ಮಹಾನಗರ ಪಾಲಿಕೆ ವಿಪತ್ತು ನಿರ್ವಹಣಾ ಘಟಕದ ಮುಖ್ಯಸ್ಥ, ಡೊಂಗ್ರಿ ಪ್ರದೇಶದ ಟಂಡೆಲ್ ಸ್ಟ್ರೀಟ್ ನಲ್ಲಿರುವ ಕೇಸರ್ಬಾಯಿ ಕಟ್ಟಡ ಇಂದು ಬೆಳಗ್ಗೆ 11.40ರ ಸುಮಾರಿಗೆ ಕುಸಿದು ಬಿದ್ದು 50ಕ್ಕೂ ಹೆಚ್ಚು ಮಂದಿ ಸಿಕ್ಕಿ ಹಾಕಿಕೊಂಡಿದ್ದು ಇಬ್ಬರು ಮೃತಪಟ್ಟಿರುವ ಶಂಕೆಯಿದೆ ಎಂದರು. 

ಅಗ್ನಿ ಶಾಮಕ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಸ್ಥಳಕ್ಕಾಗಮಿಸಿ ಪರಿಹಾರ ಕಾರ್ಯಾಚರಣೆಯಲ್ಲಿ ತೊಡಗಿವೆ. ಎರಡು ವರ್ಷದ ಮಗುವನ್ನು ಕಟ್ಟಡ ಕುಸಿದ ಸ್ಥಳದಿಂದ ರಕ್ಷಿಸಲಾಗಿದೆ.  ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಲ್ಲಿ 800 ಕೋಟಿ ರೂ. ಲೂಟಿ; ಸಂತೋಷ್ ಲಾಡ್ ರಾಜೀನಾಮೆಗೆ ಆರಗ ಜ್ಞಾನೇಂದ್ರ ಆಗ್ರಹ

ವಿಜಯೇಂದ್ರ ಮಾತನ್ನು ನಂಬುತ್ತೇನೆ, ಆದ್ರೆ...: BJPಗೆ ಘರ್ ವಾಪ್ಸಿ ಬಗ್ಗೆ ಈಶ್ವರಪ್ಪ ಶಾಕಿಂಗ್ ಹೇಳಿಕೆ

ಹೆನ್ರಿ ಕಗನ್, ಕೆನ್ಸೊ ಸೊವೈಗೆ 2026ರ ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿ