ಜೈಶಂಕರ್ 
ದೇಶ

ಕುಲಭೂಷಣ್ ಜಾಧವ್ ರನ್ನು ಕೂಡಲೇ ಬಿಡುಗಡೆ ಮಾಡಿ: ಪಾಕಿಸ್ತಾನಕ್ಕೆ ಭಾರತ ಒತ್ತಾಯ

ಭಾರತೀಯ ನೌಕಾಪಡೆಯ ನಿವೃತ್ತ ಅಧಿಕಾರಿ ಕುಲಭೂಷಣ್ ಜಾಧವ್‌ ಅವರಿಗೆ ಪಾಕಿಸ್ತಾನದ ಸೇನಾ ...

ನವದೆಹಲಿ: ಭಾರತೀಯ ನೌಕಾಪಡೆಯ ನಿವೃತ್ತ ಅಧಿಕಾರಿ ಕುಲಭೂಷಣ್ ಜಾಧವ್‌ ಅವರಿಗೆ ಪಾಕಿಸ್ತಾನದ ಸೇನಾ ನ್ಯಾಯಾಲಯವು ನೀಡಿದ್ದ ಮರಣದಂಡನೆಯನ್ನು ಶಿಕ್ಷೆಯನ್ನು ಮರುಪರಿಶೀಲಿಸುವಂತೆ ಅಂತಾರಾಷ್ಟ್ರೀಯ ನ್ಯಾಯಾಲಯ ಆದೇಶ ನೀಡಿದ ನಂತರ ಕುಲಭೂಷಣ್ ಜಾಧವ್ ಅವರನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ಪಾಕಿಸ್ತಾನವನ್ನು ಒತ್ತಾಯಿಸಿದೆ.
ಜಾಧವ್ ಅವರನ್ನು ಭಾರತಕ್ಕೆ ಕರೆತರಲು ನಿರಂತರ ಪ್ರಯತ್ನ ಮುಂದುವರಿಸಲಾಗುವುದು ಎಂದು ಹೇಳಿದೆ.
ಈ ಕುರಿತು ಇಂದು ಸದನದಲ್ಲಿ ಹೇಳಿಕೆ ನೀಡಿದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್, ಜಾಧವ್ ಅವರನ್ನು ಕಂಡು ಭೇಟಿ ಮಾಡಿ ಅವರ ಜೊತೆ ಮಾತನಾಡುವ ಭಾರತದ ಹಕ್ಕನ್ನು ಪಾಕಿಸ್ತಾನ ವಂಚಿಸಿದ್ದಲ್ಲದೆ ಕಾನೂನು ಹೋರಾಟಕ್ಕೆ ಕೂಡ ಅಡ್ಡಿಪಡಿಸಿದಂತೆ ಕಾಣುತ್ತದೆ. ಅವರು ನಿರಪರಾಧಿಯಾಗಿದ್ದು, ಅವರ ವಿರುದ್ಧ ಪಾಕಿಸ್ತಾನ ಮಾಡುತ್ತಿರುವ ಆರೋಪ ನಿರಾಧಾರವಾಗಿದೆ. ಕಾನೂನು ಪ್ರಾತಿನಿಧಿತ್ವವಿಲ್ಲದೆ ಅವರನ್ನು ಒತ್ತಾಯಪೂರ್ವಕವಾಗಿ ತಪ್ಪೊಪ್ಪಿಕೊಳ್ಳುವಂತೆ ಮಾಡಲಾಗಿದೆ ಎಂದು ಹೇಳಿದರು.
ಕುಲಭೂಷಣ ಜಾಧವ್ ಅವರನ್ನು ಕೂಡಲೇ ಬಿಡುಗಡೆ ಮಾಡಿ ಭಾರತಕ್ಕೆ ಕಳುಹಿಸಿ ಎಂದು ಒತ್ತಾಯಿಸುತ್ತೇವೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಸಿದ್ದರಾಮಯ್ಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿ.ಕೆ ಶಿವಕುಮಾರ್, ಪರಸ್ಪರ ಆಲಿಂಗನ..!

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

SCROLL FOR NEXT