ನವದೆಹಲಿ: ದೇಶಾದ್ಯಂತ 75ಕ್ಕೂ ಇಂಜಿನಿಯರಿಂಗ್ ಹಾಗೂ ತಾಂತ್ರಿಕ ಕಾಲೇಜುಗಳಿಗೆ ಮುಂದಿನ ಶೈಕ್ಷಣಿಕ ವರ್ಷದ ಒಳಗಡೆ ಬೀಗ ಬೀಳಲಿದೆ. ಈ ಪೈಕಿ ಉತ್ತರ ಪ್ರದೇಶದ ಕಾಲೇಜ್ ಗಳೇ ಹೆಚ್ಚಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಳಪೆ ಸಾಧನೆ ಮತ್ತು ವಿದ್ಯಾರ್ಥಿಗಳ ಪ್ರವೇಶಾತಿ ಕಡಿಮೆ ಆಗುತ್ತಿರುವುದೇ ಈ ಕಾಲೇಜುಗಳನ್ನು ಮುಚ್ಚಲು ಕಾರಣ ಎಂದು ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ(ಎಐಸಿಟಿಇ) ಅಧಿಕಾರಿಗಳು ಹೇಳಿದ್ದಾರೆ.
ಇದುವರೆಗೆ 78 ತಾಂತ್ರಿಕ ಕಾಲೇಜ್ ಗಳನ್ನು ಮುಚ್ಚಲಾಗಿದೆ. 2018-19ನೇ ಸಾಲಿನಲ್ಲಿ 54 ಕಾಲೇಜ್ ಗಳನ್ನು ಮುಚ್ಚಲು ನಿರ್ಧರಿಸಲಾಗಿತ್ತು. 2017-18ರಲ್ಲಿ 106 ಕಾಲೇಜ್ ಗಳಿಗೆ ಬೀಗ ಹಾಕಲಾಗಿದೆ ಎಂದು ಎಐಸಿಟಿಇ ಅಧಿಕಾರಿಗಳು ತಿಳಿಸಿದ್ದಾರೆ.
ಈ ವರ್ಷ ಉತ್ತರ ಪ್ರದೇಶ 31 ಹಾಗೂ ಪಂಜಾಬ್ ನ 6 ಇಂಜಿನಿಯರಿಂಗ್ ಮತ್ತು ತಾಂತ್ರಿಕ ಕಾಲೇಜ್ ಸೇರಿದಂತೆ 75 ಕಾಲೇಜ್ ಗಳನ್ನು ಮುಚ್ಚಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ಮೂಲಸೌಕರ್ಯ ಇಲ್ಲದ ಮತ್ತು ಸತತ 5 ವರ್ಷಗಳ ಕಾಲ ಶೇ.30ಕ್ಕಿಂತ ಕಡಿಮೆ ವಿದ್ಯಾರ್ಥಿಗಳು ದಾಖಲಾಗಿರುವ ಕಾಲೇಜುಗಳನ್ನು ಮುಚ್ಚಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos