ಡಿ. ರಾಜಾ 
ದೇಶ

ಸಿಪಿಐ ಪ್ರಧಾನ ಕಾರ್ಯದರ್ಶಿಯಾಗಿ ಡಿ. ರಾಜಾ ಸದ್ಯದಲ್ಲೇ ಅಧಿಕಾರ ಸ್ವೀಕಾರ

ಅನಾರೋಗ್ಯದ ಕಾರಣ ಎಸ್ ಎಸ್ ಸುಧಾಕರ್ ರೆಡ್ಡಿ ರಾಜೀನಾಮೆ ನೀಡಿದ ನಂತರ ರಾಜ್ಯಸಭಾ ಸಂಸದ ಡಿ ರಾಜಾ ಸಿಪಿಐ ಪ್ರಧಾನ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಪಕ್ಷದ ಮೂಲಗಳಿಂದ ತಿಳಿದುಬಂದಿದೆ.

ನವದೆಹಲಿ: ಅನಾರೋಗ್ಯದ ಕಾರಣ ಎಸ್ ಎಸ್ ಸುಧಾಕರ್ ರೆಡ್ಡಿ ರಾಜೀನಾಮೆ ನೀಡಿದ ನಂತರ ರಾಜ್ಯಸಭಾ ಸಂಸದ ಡಿ ರಾಜಾ ಸಿಪಿಐ ಪ್ರಧಾನ  ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಪಕ್ಷದ ಮೂಲಗಳಿಂದ ತಿಳಿದುಬಂದಿದೆ.
ಇತ್ತೀಚಿಗೆ ಮುಕ್ತಾಯಗೊಂಡ ಲೋಕಸಭಾ ಚುನಾವಣೆಯಲ್ಲಿ ಕಳಪೆ ಸಾಧನೆ ಹಿನ್ನೆಲೆಯಲ್ಲಿ ಪಕ್ಷದ ನಾಯಕತ್ವವನ್ನು ಬದಲಾವಣೆ ಮಾಡಲಾಗುತ್ತಿದೆ. 
ಸಿಪಿಐ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸಭೆಯಲ್ಲಿ ಡಿ. ರಾಜಾ ಅವರ ಹೆಸರನ್ನು ಸರ್ವಾನುತದಿಂದ ಪ್ರಸ್ತಾಪಿಸಲಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.ಈ ಪ್ರಸ್ತಾವವನ್ನು ರಾಷ್ಟ್ರೀಯ ಪರಿಷತ್ ಸಭೆಯಲ್ಲಿ ಚರ್ಚಿಸಿ ಅಂಗೀಕರಿಸಬೇಕಾಗಿದೆ. ಇದು ಕೇವಲ ಔಪಚಾರಿಕತೆಯಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
72 ವರ್ಷದ ಡಿ. ರಾಜಾ ತಮಿಳುನಾಡಿನಿಂದ ರಾಜ್ಯಸಭೆಯ ಸದಸ್ಯರಾಗಿದ್ದಾರೆ. ಸುಧಾಕರ್ ರೆಡ್ಡಿ 2012ರಲ್ಲಿ ಸಿಪಿಐ ಪ್ರಧಾನ ಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸಿದ್ದರು. ಅಂದಿನಿಂದಲೂ ಮೂರನೇ ಅವಧಿಗೆ ಕಾರ್ಯದರ್ಶಿಯಾಗಿ ಕೆಲಸ ಮಾಡುತ್ತಿದ್ದಾರೆ. ಆದರೆ,  ಅವರ ಅಧಿಕಾರಿವಧಿ ಮುಗಿಯಲು ಇನ್ನೂ ಎರಡು ವರ್ಷ ಬಾಕಿ ಇರುವಂತೆಯೇ ಸಿಪಿಐ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಬದಲಾವಣೆ ಮಾಡಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಂಪುಟ ಸಲಹೆ ಮೇರೆಗೆ KPSC ಅಧ್ಯಕ್ಷ ಸಾಹುಕಾರ್ ರನ್ನು ಮತ್ತೆ ಅಮಾನತು ಮಾಡಿದ ರಾಜ್ಯಪಾಲ ಗೆಹ್ಲೋಟ್!

SIR ವೇಳೆ 1.08 ಕೋಟಿಗೂ ಅಧಿಕ ಮತದಾರರು ASDDO ಪಟ್ಟಿಗೆ: ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಿಸಬೇಕು- CECಗೆ ಸಿಎಂ ಶಿವಕುಮಾರ್ ಪತ್ರ!

ಕನಸು ಕೊನೆಗೂ ನನಸು: ಲಿಂಗ ಬದಲಿಸಿಕೊಂಡಿದ್ದ Anaya Bangarಗೆ ಕ್ರಿಕೆಟ್‌ಗೆ ಮರಳಲು ಗ್ರೀನ್ ಸಿಗ್ನಲ್!

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!