ದೇಶ

ಕಾಂಗ್ರೆಸ್‌ ಹಿರಿಯ ನಾಯಕಿ, ದೆಹಲಿ ಮಾಜಿ ಸಿಎಂ ಶೀಲಾ ದೀಕ್ಷಿತ್‌ ನಿಧನ

Lingaraj Badiger
ನವದೆಹಲಿ: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್ ಹಿರಿಯ ನಾಯಕಿ ಹಾಗೂ ಮೂರು ಬಾರಿ ರಾಷ್ಟ್ರ ರಾಜಧಾನಿ ದೆಹಲಿಯ ಮುಖ್ಯಮಂತ್ರಿಯಾಗಿದ್ದ ಶೀಲಾ ದೀಕ್ಷಿತ್‌ ಅವರು ಶನಿವಾರ ನಿಧನರಾಗಿದ್ದಾರೆ. 
ಶೀಲಾ ದೀಕ್ಷಿತ್ ಅವರಿಗೆ ಅವರಿಗೆ 81 ವರ್ಷ ವಯಸ್ಸಾಗಿತ್ತು. ಸುದೀರ್ಘ ಕಾಲದ ಅನಾರೋಗ್ಯಕ್ಕೆ ಒಳಗಾಗಿದ್ದ ಅವರು, ಇಂದು ದೆಹಲಿಯ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.
1998ರಿಂದ ಸತತ ಮೂರು ಅವಧಿಗೆ ದೆಹಲಿ ಸರ್ಕಾರವನ್ನು ಮುನ್ನಡಿಸಿದ್ದರು. ರಾಷ್ಟ್ರ ರಾಜಧಾನಿಯಲ್ಲಿ ಸತತ ಮೂರು ಬಾರಿ ಜಯಗಳಿ, 15 ವರ್ಷಗಳ ಕಾಲ ಮುಖ್ಯಮಂತ್ರಿಯಾಗಿದ್ದು ಒಂದು ದಾಖಲೆಯಾಗಿತ್ತು.
ಮಾಜಿ ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್‌ ಅವರ ಬಳಿಕ ದೆಹಲಿಯ ಎರಡನೇ ಮಹಿಳಾ ಮುಖ್ಯಮಂತ್ರಿಯಾಗಿದ್ದ ಶೀಲಾ ದೀಕ್ಷಿತ್‌, ಇಂದಿರಾ ಗಾಂಧಿ ನೇತೃತ್ವದ ಸರ್ಕಾರದಲ್ಲಿ ಕೇಂದ್ರ ಸಚಿವರಾಗಿ ಸೇವೆ ಸಲ್ಲಿಸಿದ್ದರು.
ಶೀಲಾ ದೀಕ್ಷಿತ್ ಅವರು 2014ರಲ್ಲಿ ಕೆಲವು ತಿಂಗಳು ಕೇರಳದ ರಾಜ್ಯಪಾಲರಾಗಿಯೂ ಸೇವೆ ಸಲ್ಲಿಸಿದ್ದರು.
SCROLL FOR NEXT