ದೇಶ

ದೆಹಲಿ ಬಿಜೆಪಿ ಮಾಜಿ ಅಧ್ಯಕ್ಷ ರಾಮ್ ಗಾರ್ಗ್ ನಿಧನ: ಪ್ರಧಾನಿ ಸಂತಾಪ

Nagaraja AB
ನವದೆಹಲಿ:  ರಾಷ್ಟ್ರ ರಾಜಧಾನಿ ನವದೆಹಲಿಯ ಬಿಜೆಪಿಯ ಮಾಜಿ ಅಧ್ಯಕ್ಷ ರಾಮ್ ಗಾರ್ಗ್ ಇಂದು ಬೆಳಗ್ಗೆ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಬೆಳಗ್ಗೆ 7-30 ರ ಸುಮಾರಿನಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಅವರ ಕುಟುಂಬ ಸದಸ್ಯರು ಹೇಳಿದ್ದಾರೆ.
 ರಾಮ್ ಗಾರ್ಗ್ ಪಾರ್ಥೀವ ಶರೀರವನ್ನು ಅವರ ನಿವಾಸದಿಂದ ದೆಹಲಿ ಬಿಜೆಪಿ ಮುಖ್ಯ ಕಚೇರಿಗೆ ಸ್ಥಳಾಂತರಿಸಲಾಗಿದ್ದು, ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮೃತದೇಹವನ್ನು ಆಸ್ಪತ್ರೆಗೆ ದಾನ ಮಾಡಲಾಗುತ್ತಿದೆ ಎನ್ನಲಾಗುತ್ತಿದೆ.
ಆರ್ ಎಸ್ ಎಸ್ ಜೊತೆಗಿನ ಸಂಪರ್ಕದ ಹಿನ್ನೆಲೆಯಲ್ಲಿ 2003 ರಲ್ಲಿ ಅವರನ್ನು ದೆಹಲಿ ಬಿಜೆಪಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿತ್ತು.  ಗಾರ್ಗ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಕಾರ್ಯಾಧ್ಯಕ್ಷ ಜೆ. ಪಿ. ನಡ್ಡಾ ಸಂತಾಪ ಸೂಚಿಸಿದ್ದಾರೆ.
ರಾಮ್ ಗಾರ್ಗ್ ನಿಧನದಿಂದಾಗಿ  ಪಕ್ಷಕ್ಕೆ ತುಂಬಲಾರದ ನಷ್ಟ ಉಂಟಾಗಿದೆ ಎಂದು ಟ್ವೀಟ್ ನಲ್ಲಿ ತಿಳಿಸಿದ್ದಾರೆ.
SCROLL FOR NEXT