ದೇಶ

ಕೊಚ್ಚಿ: ಹಿಂಸಾಚಾರಕ್ಕೆ ತಿರುಗಿದ ಸಿಪಿಐ ಪ್ರತಿಭಟನೆ, ಶಾಸಕ ಸೇರಿ ಹಲವರಿಗೆ ಗಾಯ

Lingaraj Badiger
ಕೊಚ್ಚಿ: ಕಳೆದ ಬುಧವಾರ ಎಐಎಸ್ಎಫ್ ಮತ್ತು ಎಸ್ಎಫ್ಐ ನಡುವೆ ನಡೆದ ಘರ್ಷಣೆಗೆ ಸಂಬಂಧಿಸಿದಂತೆ ನ್ಯಾರಕಲ್ ಸರ್ಕಲ್ ಇನ್ಸ್ ಪೆಕ್ಟರ್ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿ ಎರ್ನಾಕುಲಂ ಜಿಲ್ಲೆಯ ಸಿಪಿಐ ಕಾರ್ಯಕರ್ತರು ಮಂಗಳವಾರ ಕೊಚ್ಚಿ ವಲಯ ಪೊಲೀಸ್ ಮಹಾನಿರ್ದೇಶಕರ ಕಚೇರಿ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಪ್ರತಿಭಟನಾ ಮೆರವಣಿಗೆಯಲ್ಲಿ ಹಲವು ನಾಯಕರು ಹಾಗೂ ಕಾರ್ಯಕರ್ತರು ಸೇರಿದಂತೆ ನೂರಾರು ಜನ ಭಾಗವಹಿಸಿದ್ದರು. ಪ್ರತಿಭಟನಾ ಮೆರವಣಿಗೆ ಪೊಲೀಸ್ ಮಹಾ ನಿರ್ದೇಶಕರ ಕಚೇರಿ ತಲುಪುತ್ತಿದ್ದಂತೆ ಕೆಲವು ಕಾರ್ಯಕರ್ತರು ಬ್ಯಾರಿಕೇಡ್ ಗಳನ್ನು ತಳ್ಳಿ ಕಚೇರಿಗೆ ನುಗ್ಗಲು ಯತ್ನಿಸಿದರು. ಅಲ್ಲದೆ ಕೆಲವರು ಕಚೇರಿ ಮೇಲೆ ಕಲ್ಲು ತೂರಾಟ ನಡೆಸಿದರು. ಪೊಲೀಸರು ಪ್ರತಿಭಟನಾಕಾರರನ್ನು ನಿಯಂತ್ರಿಸಲು ಲಾಠಿ ಚಾರ್ಜ್ ನಡೆಸಿದರು. ಲಾಠಿ ಚಾರ್ಜ್ ನಲ್ಲಿ ಶಾಸಕ ಎಲ್ಡೊ ಅಬ್ರಹಂ ಸೇರಿದಂತೆ ಹಲವು ಕಾರ್ಯಕರ್ತರು ಗಂಭೀರವಾಗಿ ಗಾಯಗೊಂಡಿದ್ದಾರೆ.
ವೈಪೀನ್ ನ ಸರ್ಕಾರಿ ಕಲಾ ಮತ್ತು ವಿಜ್ಞಾನ ಕಾಲೇಜ್ ನಲ್ಲಿ ಕಳೆದ ಬುಧವಾರ ವಿದ್ಯಾರ್ಥಿ ಸಂಘದ ಚುನಾವಣೆ ಪ್ರಚಾರದ ವೇಳೆ ಎಐಎಸ್ಎಫ್ ಮತ್ತು ಎಸ್ಎಫ್ಐ ನಡುವೆ ಘರ್ಷಣೆ ನಡೆದಿತ್ತು. ಇದರಲ್ಲಿ ಸರ್ಕಲ್ ಇನ್ಸ್ ಪೆಕ್ಟರ್ ಪಾತ್ರ ಇದೆ ಎಂದು ಸಿಪಿಐ ಆರೋಪಿಸಿದೆ.
SCROLL FOR NEXT