ದೇಶ

ಕರ್ನಾಟಕ ರಾಜಕೀಯ ಪ್ರಜಾಪ್ರಭುತ್ವ ಇತಿಹಾಸದಲ್ಲಿ ಒಂದು ಕರಾಳ ಅಧ್ಯಾಯ: ಮಾಯಾವತಿ

Lingaraj Badiger
ಲಖನೌ: ಕರ್ನಾಟಕದಲ್ಲಿ ಕಾಂಗ್ರೆಸ್ - ಜೆಡಿಎಸ್ ಮೈತ್ರಿ ಸರ್ಕಾರವನ್ನು ಬೀಳಿಸಿದ ರೀತಿ ಪ್ರಜಾಪ್ರಭುತ್ವ ಇತಿಹಾಸದಲ್ಲಿ ಒಂದು ಕರಾಳ ಅಧ್ಯಾಯವಾಗಿ ದಾಖಲಾಗಲಿದೆ ಎಂದು ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ ಅವರು ಬುಧವಾರ ಹೇಳಿದ್ದಾರೆ.
ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ವಿಶ್ವಾಸಮತ ಸಾಬೀತುಪಡಿಸುವಲ್ಲಿ ವಿಫಲವಾದ ಕೆಲವೇ ಗಂಟೆಗಳಲ್ಲಿ ವಿಶ್ವಾಸಮತದಿಂದ ದೂರ ಉಳಿದಿದ್ದ ಪಕ್ಷದ ಏಕೈಕ ಶಾಸಕ ಎನ್ ಮಹೇಶ್ ಅವರನ್ನು ಮಾಯಾವತಿ ಪಕ್ಷದಿಂದ ಉಚ್ಚಾಟನೆ ಮಾಡಿದ್ದರು.
ಸಂವಿಧಾನಕ್ಕೆ ವಿರುದ್ಧವಾಗಿ ಬಿಜೆಪಿ ಅಧಿಕಾರ ಮತ್ತು ಹಣ ಬಲದಿಂದ ಕರ್ನಾಟಕದ ಸಮ್ಮಿಶ್ರ ಸರ್ಕಾರದ ಬೀಳಿಸಿದ್ದು, ಇದು ಪ್ರಜಾಪ್ರಭುತ್ವ ಇತಿಹಾಸದಲ್ಲಿ ಒಂದು ಕರಾಳ ಅಧ್ಯಾಯವಾಗಿ ದಾಖಲಾಗಲಿದೆ ಎಂದು ಮಾಯಾವತಿ ಇಂದು ಟ್ವೀಟ್ ಮಾಡಿದ್ದಾರೆ.
ನಿನ್ನೆ ವಿಶ್ವಾಸಮತ ಸಾಬೀತುಪಡಿಸುವಲ್ಲಿ ವಿಫಲವಾಗಿದ್ದ ಕುಮಾರಸ್ವಾಮಿ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಅವರಿಗೆ ಹಂಗಾಮಿ ಸಿಎಂ ಆಗಿ ಮುಂದುವರೆಯುವಂತೆ ರಾಜ್ಯಪಾಲ ವಜುಭಾಯಿ ವಾಲಾ ಅವರು ಸೂಚಿಸಿದ್ದಾರೆ.
SCROLL FOR NEXT