ಕರ್ನಾಟಕದ ಮಾದರಿಯಲ್ಲೇ ಮಧ್ಯಪ್ರದೇಶ ಕಾಂಗ್ರೆಸ್ ನಲ್ಲೂ ಭಿನ್ನಮತ: ಸರ್ಕಾರ ಬಿದ್ದರೆ ನಾವು ಹೊಣೆಯಲ್ಲ- ಶಿವರಾಜ್ ಸಿಂಗ್ 
ದೇಶ

ಕರ್ನಾಟಕದ ಮಾದರಿಯಲ್ಲೇ ಮಧ್ಯಪ್ರದೇಶ ಕಾಂಗ್ರೆಸ್ ನಲ್ಲೂ ಭಿನ್ನಮತ: ಸರ್ಕಾರ ಬಿದ್ದರೆ ನಾವು ಹೊಣೆಯಲ್ಲ- ಶಿವರಾಜ್ ಸಿಂಗ್

ಕರ್ನಾಟಕದಲ್ಲಿ ಭಿನ್ನಮತೀಯ ಶಾಸಕರಿಂದ ಕಾಂಗ್ರೆಸ್-ಜೆಡಿಎಸ್ ಸರ್ಕಾರ ಪತನಗೊಂಡ ಬೆನ್ನಲ್ಲೆ ಮಧ್ಯಪ್ರದೇಶದ ಕಾಂಗ್ರೆಸ್ ನಲ್ಲೂ ಭಿನ್ನಮತ ತಲೆದೋರಿದೆ.

ಭೋಪಾಲ್: ಕರ್ನಾಟಕದಲ್ಲಿ ಭಿನ್ನಮತೀಯ ಶಾಸಕರಿಂದ ಕಾಂಗ್ರೆಸ್-ಜೆಡಿಎಸ್ ಸರ್ಕಾರ ಪತನಗೊಂಡ ಬೆನ್ನಲ್ಲೆ ಮಧ್ಯಪ್ರದೇಶದ ಕಾಂಗ್ರೆಸ್ ನಲ್ಲೂ ಭಿನ್ನಮತ ತಲೆದೋರಿದೆ. 
ಮಧ್ಯಪ್ರದೇಶದ ಕಾಂಗ್ರೆಸ್ ನಲ್ಲೂ ಕರ್ನಾಟಕದ ಮಾದರಿಯಲ್ಲೇ ಶಾಸಕರು ಬಂಡಾಯವೆದ್ದಿದ್ದಾರೆ ಎಂದು ಅಲ್ಲಿನ ಮಾಜಿ ಸಿಎಂ, ಬಿಜೆಪಿ ನಾಯಕ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ. 
ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಹಾಗೂ ಬಿಎಸ್ ಪಿ-ಎಸ್ ಪಿ ಬೆಂಬಲದ ನಡುವೆ ಭಿನ್ನಮತ ತಲೆದೋರಿದೆ. ಈ ಕಾರಣದಿಂದಾಗಿ ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಸರ್ಕಾರ ಪತನಗೊಂಡರೆ ನಾವೇನು ಮಾಡುವುದಕ್ಕೆ ಆಗುವುದಿಲ್ಲ. ನಮ್ಮನ್ನು ದೂಷಿಸಬೇಡಿ ಎಂದು ಹೇಳಿದ್ದಾರೆ. 
ಶಿವರಾಜ್ ಸಿಂಗ್ ಹೇಳಿಕೆಗೆ ಕಾಂಗ್ರೆಸ್ ನಾಯಕ ಜಿತು ಪಟ್ವಾರಿ ಪ್ರತಿಕ್ರಿಯೆ ನೀಡಿದ್ದು, ಕಮಲ್ ನಾಥ್ ನೇತೃತ್ವದ ಸರ್ಕಾರಕ್ಕೆ ಸಮಸ್ಯೆಗಳನ್ನು ತಂದೊಡ್ಡುವುದಕ್ಕೆ ಬಿಜೆಪಿ ಎಲ್ಲವನ್ನೂ ಮಾಡಿದೆ. ಕುಮಾರಸ್ವಾಮಿ ಸರ್ಕಾರವನ್ನು ಅಷ್ಟೇ ಅಲ್ಲದೇ ಮಧ್ಯಪ್ರದೇಶದ ಕಾಂಗ್ರೆಸ್ ಸರ್ಕಾರವನ್ನೂ ಸಹ ಪತನಗೊಳಿಸಲು ಬಿಜೆಪಿ ಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?