ದೇಶ

ಬಿಜೆಪಿ ಕಾರ್ಯಕರ್ತ ಕೆವಿ ಸುರೇಂದ್ರನ್ ಹತ್ಯೆ ಪ್ರಕರಣ: 5 ಸಿಪಿಎಂ ಕಾರ್ಯಕರ್ತರಿಗೆ ಜೀವಾವಧಿ ಶಿಕ್ಷೆ

Lingaraj Badiger
ಕಣ್ಣೂರ್: ಬಿಜೆಪಿ ಕಾರ್ಯಕರ್ತ ಕೆವಿ ಸುರೇಂದ್ರನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣಾ ನ್ಯಾಯಾಲಯ ಐದು ಸಿಪಿಎಂ ಕಾರ್ಯಕರ್ತರಿಗೆ ಜೀವಾವಧಿ ಶಿಕ್ಷೆ ವಿಧಿಸಿ ಶುಕ್ರವಾರ ತೀರ್ಪು ನೀಡಿದೆ.
2008ರಲ್ಲಿ ನಡೆದ 62 ವರ್ಷದ ಸುರೇಂದ್ರನ್ ಕೊಲೆ ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ತೆಲ್ಲಿಚೆರಿ ಹೆಚ್ಚುವರಿ ಸೆಷನ್ಸ್ ಕೋರ್ಟ್ ನ್ಯಾಯಾಧೀಶ ಪಿಎನ್ ವಿನೋದ್ ಅವರು, ಐವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ತಲಾ 1 ಲಕ್ಷ ರುಪಾಯಿ ದಂಡ ವಿಧಿಸಿದ್ದಾರೆ. ಅಲ್ಲದೆ ಇಬ್ಬರು ಆರೋಪಿಗಳನ್ನು ಖುಲಾಸೆಗೊಳಿಸಿ ತೀರ್ಪು ನೀಡಿದ್ದಾರೆ.
ಅಖಿಲೇಶ್, ಎಂ ಲಿಜೇಶ್, ಕೆ ವಿನೀಶ್, ಕಲ್ಲೇಶ್ ಹಾಗೂ ಶೈಜೇಶ್ ಗೆ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದೆ.
ಮಾರ್ಚ್ 7, 2008ರಲ್ಲಿ ಸುರೇಂದ್ರ ಮನೆ ಮೇಲೆ ದಾಳಿ ನಡೆಸಿದ್ದ ಸಿಪಿಎಂ ಕಾರ್ಯಕರ್ತರು ಬಿಜೆಪಿ ಕಾರ್ಯಕರ್ತನ ಮೇಲೆ ಮಾರಾಣಾಂತಿ ಹಲ್ಲೆ ನಡೆಸಿದ್ದರು. ಕೂಡಲೇ ಸುರೇಂದ್ರನ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.
SCROLL FOR NEXT