ರಮಾದೇವಿ - ಅಜಂ ಖಾನ್ 
ದೇಶ

ಆಕ್ಷೇಪಾರ್ಹ ಹೇಳಿಕೆ: ಅಜಂ ಖಾನ್ ನಂತಹ ವ್ಯಕ್ತಿಗಳನ್ನು ಎದುರಿಸುವ ಶಕ್ತಿ ಇದೆ - ರಮಾದೇವಿ

ಸದನದಲ್ಲಿ ತಮ್ಮ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಸಮಾಜವಾದಿ ಪಕ್ಷದ ಸಂಸದ ಅಜಂ ಖಾನ್ ನಂತಹ ವ್ಯಕ್ತಿಗಳನ್ನು ಎದುರಿಸುವ ಶಕ್ತಿ ನನಗೆ ಇದೆ ಎಂದು...

ನವದೆಹಲಿ: ಸದನದಲ್ಲಿ ತಮ್ಮ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಸಮಾಜವಾದಿ ಪಕ್ಷದ ಸಂಸದ ಅಜಂ ಖಾನ್ ನಂತಹ ವ್ಯಕ್ತಿಗಳನ್ನು ಎದುರಿಸುವ ಶಕ್ತಿ ನನಗೆ ಇದೆ ಎಂದು ಬಿಹಾರ ಬಿಜೆಪಿ ಸಂಸದೆ ರಮಾದೇವಿ ಅವರು ಶನಿವಾರ ಹೇಳಿದ್ದಾರೆ.
ನಾನು ಕುಳಿತ ಸ್ಥಾನ ಕೇವಲು ನನಗೆ ಮಾತ್ರ ಸೇರಿದ್ದಲ್ಲ. ಅದು ಎಲ್ಲರಿಗೂ ಸೇರಿದ್ದು. ಹೀಗಾಗಿ ಅವರು ನೀಡಿದ ಹೇಳಿಕೆ ದೇಶದ ಎಲ್ಲಾ ಮಹಿಳೆಯರಿಗೂ ಅಗೌರವ ತೋರಿದಂತೆ. ಅಜಂ ಖಾನ್ ನಂತಹ ವ್ಯಕ್ತಿಗಳನ್ನು ಎದುರಿಸುವ ಶಕ್ತಿ ನನಗೆ ಇದೆ ಎಂದು ರಮಾದೇವಿ ವರದಿಗಾರರಿಗೆ ತಿಳಿಸಿದ್ದಾರೆ.
ಗುರುವಾರ ತ್ರಿವಳಿ ತಲಾಖ್ ಕುರಿತು ಗಂಭೀರ ಚರ್ಚೆ ನಡೆಯುತ್ತಿರುವ ಸಮಯದಲ್ಲಿ ಇತರ ಸದಸ್ಯರ ಗದ್ದಲಕ್ಕೆ ಗಮನಕೊಡದೇ ತಮ್ಮನ್ನು ಉದ್ದೇಶಿಸಿ ಮಾತನಾಡುವಂತೆ ಸ್ಪೀಕರ್ ಅನುಪಸ್ಥಿತಿಯಲ್ಲಿ ಕಲಾಪ ನಡೆಸುತ್ತಿದ್ದ ಬಿಜೆಪಿ ಸಂಸದೆ ರಮಾದೇವಿ ಅವರು ಅಜಂ ಖಾನ್ ಅವರಿಗೆ ಸೂಚಿಸಿದ್ದರು. 
ಈ ವೇಳೆ ರಮಾದೇವಿಯವರನ್ನು ಉದ್ದೇಶಿಸಿ ಮಾತನಾಡಿದ ಅಜಂ ಖಾನ್, ‘ಆಪ್ ಕೀ ಆಂಖೋ ಮೇ ಆಂಖೇ ಡಾಲ್ ಕೇ ಬಾತ್ ಕರ್ ನೇ ಕಾ ಮನ್ ಕರ್ ತಾ ಹೈ’ (ನಿಮ್ಮ ಕಣ್ಣಲ್ಲಿ ಕಣ್ಣನಿಟ್ಟು ಮಾತನಾಡುವ ಬಯಕೆ ಉಂಟಾಗುತ್ತಿದೆ) ಎಂದು ಹೆಳಿದರು.
ಇದಕ್ಕೆ ತಕ್ಷಣ ಪ್ರತಿಕ್ರಿಯಿಸಿದ ಸಭಾಧ್ಯಕ್ಷರ ಪೀಠದಲ್ಲಿದ್ದ ರಮಾದೇವಿ ಅವರು ‘ಇದು ಮಾತನಾಡುವ ರೀತಿ ಅಲ್ಲ, ಮತ್ತು ಈ ಮಾತುಗಳನ್ನು ಕಡತದಿಂದ ತೆಗೆದು ಹಾಕಿ’ ಎಂದು ಸೂಚನೆ ಕೊಟ್ಟರು.
ಇನ್ನು ಅಜಂ ಖಾನ್ ಹೇಳಿಕೆಯನ್ನು ಲೋಕಸಭೆಯ ಮಹಿಳಾ ಸಂಸದರು ಖಂಡಿಸಿದ್ದು, ಅವರನ್ನು ಸದನದಿಂದ ಅಮಾನತುಗೊಳಿಸಬೇಕು ಎಂದು ಸ್ಪೀಕರ್ ಓಂ ಪ್ರಕಾಶ್ ಬಿರ್ಲಾ ಅವರಿಗೆ ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT