ಸ್ಪೀಕರ್ ರಮೇಶ್ ಕುಮಾರ್ ಸುದ್ದಿಗೋಷ್ಠಿ 
ದೇಶ

ನೂತನ ಸರ್ಕಾರದಲ್ಲಿ ಸ್ಪೀಕರ್‌ ಆಗಿ ಮುಂದುವರಿಯಲು ಇಷ್ಟವಿಲ್ಲ: ರಮೇಶ್ ಕುಮಾರ್

ನೂತನ ಸರ್ಕಾರದಲ್ಲಿ ಸ್ಪೀಕರ್‌ ಆಗಿ ಮುಂದುವರಿಯಲು ಇಷ್ಟವಿಲ್ಲ ಎಂದು ಸ್ಪೀಕರ್ ರಮೇಶ್ ಕುಮಾರ್ ಹೇಳಿದ್ದಾರೆ.

ಬೆಂಗಳೂರು: ನೂತನ ಸರ್ಕಾರದಲ್ಲಿ ಸ್ಪೀಕರ್‌ ಆಗಿ ಮುಂದುವರಿಯಲು ಇಷ್ಟವಿಲ್ಲ ಎಂದು ಸ್ಪೀಕರ್ ರಮೇಶ್ ಕುಮಾರ್ ಹೇಳಿದ್ದಾರೆ.
ಇಂದು ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ಕರೆದು ಮಾತನಾಡಿದ ಸ್ಪೀಕರ್ ರಮೇಶ್ ಕುಮಾರ್ ಅವರು, 'ಸಿಎಂ ಆದಮೇಲೆ ಯಡಿಯೂರಪ್ಪನವರು ಸೋಮವಾರ ಬಹಯಮತ ಸಾಬೀತಿಗೆ ಅವಕಾಶ ಕೇಳಿದ್ದಾರೆ. ಇದೇ ವೇಳೆ ಹಣಕಾಸಿನ ಮಸೂದೆಯ ಅಂಗೀಕಾರದ ಮತದಾನಕ್ಕೆ ಮನವಿ ಮಾಡಿಕೊಂಡಿದ್ದಾರೆ. ಈ ಸಂಬಂಧ ವಿಧಾನಸಭೆಯ ಅಧಿವೇಶನಕ್ಕೆ ಎಲ್ಲ ಸದಸ್ಯರು ಭಾಗವಹಿಸಬೇಕೆಂದು ಕಚೇರಿಯಿಂದ ಸೂಚನಾ ಪತ್ರ ಕಳುಹಿಸಲಾಗಿದೆ. 
ಸ್ಪೀಕರ್ ಆಗಿರುವ ಕಾರಣಕ್ಕೆ ನನ್ನ ಮೇಲೆ ಮಾನಸಿಕ ಒತ್ತಡ ಹಾಕಲಾಗಿದೆ. ಖಿನ್ನನಾಗಿದ್ದಾನೆ. ನನ್ನ ವೈಯಕ್ತಿಕ ಜೀವನದಲ್ಲಿ ತುಳಸಿದಾಸಪ್ಪ, ಅಬ್ದುಲ್ ನಜೀರ್ ಸಾಬ್, ಬಿ.ಎ.ಮೊಯಿದ್ದೀನ್, ಎ.ಕೆ.ಸುಬ್ಬಯ್ಯ ಅವರಂಥವರಿಂದ ನಾನು ಪ್ರಭಾವಿತನಾಗಿದ್ದೇನೆ. ನನ್ನನ್ನು ರೂಪಿಸಿದವರು ಅವರು. ನನ್ನ ನಾಲ್ಕು ದಶಕಗಳ ಜೀವನದ ಪ್ರಮುಖ ಘಟ್ಟ, ಬಹುಶಃ ಕೊನೆಯ ಘಟ್ಟವೂ ಆಗಬಹುದು. ಅತ್ಯಂತ ಭಯ, ಗೌರವ, ಜವಾಬ್ದಾರಿಯನ್ನು ಹೊಟ್ಟೆಯಲ್ಲಿಟ್ಟುಕೊಂಡು ನಾನು ಈ ತೀರ್ಮಾನಕ್ಕೆ ಬಂದಿದ್ದೇನೆ ಎಂದು ಹೇಳಿದರು.
ಅಂತೆಯೇ ನೂತನ ಸರ್ಕಾರದಲ್ಲಿ ನನಗೆ ಸ್ಪೀಕರ್‌ ಆಗಿ ಮುಂದುವರಿಯಲು ಇಷ್ಟವಿಲ್ಲ. ಎಲ್ಲವನ್ನು ಸೋಮವಾರ ನಡೆಯುವ ವಿಧಾನಸಭಾ ಅಧಿವೇಶನದಲ್ಲಿ ಸ್ಪಷ್ಟಪಡಿಸುತ್ತೇನೆ ಎಂದು ಸ್ಪೀಕರ್ ರಮೇಶ್‌ ಕುಮಾರ್ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT