ದೇಶ

ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಜೈಪಾಲ್ ರೆಡ್ಡಿ ಇನ್ನಿಲ್ಲ

Raghavendra Adiga
ಹೈದರಾಬಾದ್: ಹಿರಿಯ ಕಾಂಗ್ರೆಸ್ ಮುಖಂಡ ಮತ್ತು ಮಾಜಿ ಕೇಂದ್ರ ಸಚಿವ ಜೈಪಾಲ್ ರೆಡ್ಡಿ ಅವರು ಹೈದರಾಬಾದ್‌ನಲ್ಲಿ ಭಾನುವಾರ ಮುಂಜಾನೆ ನಿಧನ ಹೊಂದಿದರು ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. 
 77 ವರ್ಷದ ರೆಡ್ಡಿ ಅವರಿಗೆ ಇತ್ತೀಚೆಗೆ ನ್ಯುಮೋನಿಯಾ ಇರುವುದು ಪತ್ತೆಯಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅಲ್ಲಿ ಅವರು ಮುಂಜಾನೆ 1.28 ಕ್ಕೆ ನಿಧನರಾದರು.
ಜೈಪಾಲ್ ರೆಡ್ಡಿ 1984 ರಿಂದ ದಶಕಗಳ ಕಾಲ ಸಂಸದರಾಗಿದ್ದರು ಮತ್ತು ವಿವಿಧ ಸರ್ಕಾರಗಳಲ್ಲಿ ಪ್ರಮುಖ ಖಾತೆಗಳನ್ನು ನಿರ್ವಹಿಸಿದ್ದರು.
ಐಕೆ ಗುಜ್ರಾಲ್ ಸರ್ಕಾರದಲ್ಲಿ ಮಾಹಿತಿ ಮತ್ತು ಪ್ರಸಾರ ಸಚಿವರಾಗಿದ್ದ ರೆಡ್ಡಿ ಯುಪಿಎ -1 ಸರ್ಕಾರದ ಅವಧಿಯಲ್ಲಿನಗರಾಭಿವೃದ್ದಿ ಮತ್ತು ಸಂಸ್ಕೃತಿ ಖಾತೆ ನಿರ್ವಹಿಸಿದ್ದರು. ಯುಪಿಎ -2 ರಲ್ಲಿ ಅವರನ್ನು ಮತ್ತೆ ನಗರಾಭಿವೃದ್ಧಿ ಸಚಿವರನ್ನಾಗಿ ನೇಮಕ ಮಾಡಲಾಗಿತ್ತು.  ನಂತರ, ಅವರು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲದ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು.ಅಲ್ಲದೆ ವಿಜ್ಞಾನ ಮತ್ತು ತಂತ್ರಜ್ಞಾನ ಮತ್ತು ಭೂ ವಿಜ್ಞಾನ ಸಚಿವರೂ ಆಗಿದ್ದರು.
ಅವರು ಲೋಕಸಭೆಯಲ್ಲಿ ತೆಲಂಗಾಣದ ಚೆವೆಲ್ಲಾ ಕ್ಷೇತ್ರವನ್ನು ಪ್ರತಿನಿಧಿಸಿದ್ದರು.
SCROLL FOR NEXT