ಮುಂಬೈ: ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರ 5 ವರ್ಷಗಳ ಕಾಲ ಸುಭದ್ರ ಸರ್ಕಾರ ನೀಡಿದ್ದು ಇದೇ ವರ್ಷದ ಅಂತ್ಯದಲ್ಲಿ ಮಹಾರಾಷ್ಟ್ರದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು ಕಾಂಗ್ರೆಸ್ ಮತ್ತು ಎನ್‌ಸಿಪಿಯ 50 ಶಾಸಕರು ಸದ್ಯವೇ ಬಿಜೆಪಿಗೆ ಸೇರ್ಪಡೆಯಾಗಲು ಮುಂದಾಗಿದ್ದಾರೆ ಎಂದು ಸಚಿವರೊಬ್ಬರು ಆರೋಪಿಸಿದ್ದಾರೆ.
ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ(ಎನ್ಸಿಪಿ)ದ ಮುಖ್ಯಸ್ಥ ಶರದ್ ಪವಾರ್ ಅವರು ಬಿಜೆಪಿಯು ಪ್ರತಿಪಕ್ಷಗಳ ಶಾಸಕರನ್ನು ಖರೀದಿಸುತ್ತಿದೆ ಎಂದು ಆರೋಪ ಮಾಡಿದ್ದ ಬೆನ್ನಲ್ಲೇ ಇದೀಗ ಹಿರಿಯ ಸಚಿವ ಗಿರೀಶ್ ಮಹಾಜನ್ ಅವರು ಬಿಜೆಪಿ 50ಕ್ಕೂ ಹೆಚ್ಚು ಕಾಂಗ್ರೆಸ್ ಮತ್ತು ಎನ್‌ಸಿಪಿ ಶಾಸಕರನ್ನು ಸೆಳೆಯುತ್ತಿದೆ ಎಂದು ಆರೋಪಿಸಿದ್ದಾರೆ.
ಇನ್ನು ಒಂದೆರಡು ವಾರಗಳಲ್ಲಿ ಕಾಂಗ್ರೆಸ್ ಹೀನಾಯ ಸ್ಥಿತಿ ತಲುಪಲಿದೆ. ಎನ್‌ಸಿಪಿಯೂ ದುರ್ಬಲಗೊಂಡಿದೆ. ವಿಧಾನಸಭೆ ಚುನಾವಣೆ ನಂತರ ಕಾಂಗ್ರೆಸ್ ಮತ್ತು ಎನ್‌ಸಿಪಿಗೆ ಅಸ್ತಿತ್ವದ ಪ್ರಶ್ನೆ ಎದುರಾಗಲಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics