ಅಜಂ ಖಾನ್ 
ದೇಶ

ಒತ್ತಡಕ್ಕೆ ಮಣಿದ ಅಜಂಖಾನ್: ಸಂಸತ್ತಿನಲ್ಲಿ ಕ್ಷಮೆ ಯಾಚನೆ

ಲೋಕಸಭೆಯ ಮುಂಗಾರು ಅಧಿವೇಶನದ ಸಮಯದಲ್ಲಿ ಸಂಸದ, ಸಮಾಜವಾದಿ ಪಕ್ಷದ ಮುಖಂಡ ಅಜಂ ಆನ್ ನೀಡಿದ್ದ ವಿವಾದಾತ್ಮಕ ಹೇಳಿಕೆಗೆ ಕೊನೆಗೂ ..

ನವದೆಹಲಿ: ಲೋಕಸಭೆಯ ಮುಂಗಾರು ಅಧಿವೇಶನದ ಸಮಯದಲ್ಲಿ ಸಂಸದ, ಸಮಾಜವಾದಿ ಪಕ್ಷದ ಮುಖಂಡ ಅಜಂ ಆನ್ ನೀಡಿದ್ದ ವಿವಾದಾತ್ಮಕ ಹೇಳಿಕೆಗೆ ಕೊನೆಗೂ ಕ್ಷಮೆ ಯಾಚಿಸಿದ್ದಾರೆ. 
ಗುರುವಾರ ತ್ರಿವಳಿ ತಲಾಖ್ ಬಗ್ಗೆ ಲೋಕಸಭೆಯಲ್ಲಿ ಚರ್ಚೆ ನಡೆಯುತ್ತಿದ್ದ ಸಮಯದಲ್ಲಿ ಸ್ಪೀಕರ್ ಕುರ್ಚಿಯಲ್ಲಿದ್ದ ಬಿಹಾರದ ಶಿಯೋಹರ್ ಕ್ಷೇತ್ರದ ಸಂಸದೆ ರಮಾದೇವಿ ಅವರನ್ನು "ನಿಮ್ಮ ಕಣ್ಣಲ್ಲಿ ಕಣ್ಣಿಟ್ಟು ನೋಡಬೇಕು ಎಂದು ನನಗೆ ಅನ್ನಿಸುತ್ತದೆ'' ಎಂದು ಆಜಂ ಖಾನ್ ಹೇಳಿದ್ದರು. 
ಅವರ ಈ ಮಾತನ್ನು ಇಡೀ ಸದನವೂ ವಿರೋಧಿಸಿತ್ತು. ಕೂಡಲೇ ರಮಾ ದೇವಿ ಅವರು, 'ನಾನು ನಿಮ್ಮ ಸಹೋದರಿ ಇದ್ದಂತೆ, ನಿಮ್ಮ ಈ ಮಾತು ಕಡತದಲ್ಲಿ ದಾಖಲಾಗುವುದಿಲ್ಲ' ಎಂದರು. 
ಈ ಕುರಿತು ಕ್ಷಮೆ ಯಾಚಿಸುವಂತೆ ಮತ್ತು ಅಜಂ ಖಾನ್ ವಿರುದ್ಧ ಸ್ಪೀಕರ್ ಕ್ರಮ ಕೈಗೊಳ್ಳುವಂತೆ ಲೋಕಸಭೆಯಲ್ಲಿದ್ದ ಎಲ್ಲ ಮಹಿಳಾ ಸಂಸದರೂ ಒಕ್ಕೊರಲಿನಿಂದ ಧ್ವನಿ ಎತ್ತಿದ್ದರು.
 ನಾನು ಹಲವು ವರ್ಷಗಳಿಂದ ರಾಜ್ಯ ಸಭೆ ಮತ್ತು ಲೋಕಸಬೆಯ ಸಂಸದನಾಗಿದ್ದೇನೆ. ಸ್ಪೀಕರ್ ಹುದ್ದೆಯ ಘನತೆ, ಮಹತ್ವ ನನಗೆ ಅರ್ಥವಾಗುತ್ತದೆ. ನಾನು ಯಾರ ಭಾವನೆಯನ್ನೂ ನೋಯಿಸುವ ಉದ್ದೇಶದಿಂದ ಆ ಮಾತನ್ನು ಹೇಳಿರಲಿಲ್ಲ. ಆದರೆ ಅದರಿಂದ ಯಾರದ್ದಾದರೂ ಭಾವನೆಗೆ ನೋವಾಗಿದ್ದರೆ ಅದಕ್ಕಾಗಿ ನಾನು ಕ್ಷಮೆ ಯಾಚಿಸುತ್ತೇನೆ" ಎಂದು ಅಜಂ ಖಾನ್ ಹೇಳಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್