ಕುಲದೀಪ್ ಸಿಂಗ್ ಸೆಂಗರ್ 
ದೇಶ

ಕುಲದೀಪ್ ಸೆಂಗರ್ ವಿರುದ್ಧ ಸಾಕ್ಷ್ಯ ಇದೆ: ಉನ್ನಾವೊ ಅತ್ಯಾಚಾರ ಸಂತ್ರಸ್ತೆಯ ಮಾವ

2017ರಲ್ಲಿ ತನ್ನ ಸೋದರ ಸೊಸೆ ಮೇಲೆ ಅತ್ಯಾಚಾರ ಎಸಗಿದ ಪ್ರಭಾವಿ ರಾಜಕಾರಣಿ ಹಾಗೂ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗರ್ ಅವರು ವಿರುದ್ಧ ತಮ್ಮ ಬಳಿ...

ಉನ್ನಾವೊ: 2017ರಲ್ಲಿ ತನ್ನ ಸೋದರ ಸೊಸೆ ಮೇಲೆ ಅತ್ಯಾಚಾರ ಎಸಗಿದ ಪ್ರಭಾವಿ ರಾಜಕಾರಣಿ ಹಾಗೂ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗರ್ ಅವರು ವಿರುದ್ಧ ತಮ್ಮ ಬಳಿ ಸಾಕ್ಷ್ಯಗಳಿವೆ ಎಂದು ಉನ್ನಾವೊ ಅತ್ಯಾಚಾರ ಸಂತ್ರಸ್ತೆಯ ಮಾವ ಬುಧವಾರ ಹೇಳಿದ್ದಾರೆ.
ಭಾನುವಾರ ನಡೆದ ಕಾರು ಅಪಘಾತದಲ್ಲಿ ಸಂತ್ರಸ್ತೆ ಮಾವ ಮಹೇಶ್ ಸಿಂಗ್ ಅವರ ಪತ್ನಿ ಪುಷ್ಪಾ ಮೃತಪಟ್ಟಿದ್ದು, ಪತ್ನಿಯ ಅಂತಿಮ ದರ್ಶನಕ್ಕಾಗಿ ರಾಯ್ ಬರೇಲಿ ಜೈಲಿನಿಂದ ಗಂಗಾ ಘಾಟ್ ಗೆ ಅವರನ್ನು ಕರೆತರಲಾಗಿತ್ತು. ಈ ವೇಳೆ ಮಾಧ್ಯಮದ ಜತೆ ಮಾತನಾಡಲು ಮಹೇಶ್ ಸಿಂಗ್ ಗೆ ಪೊಲೀಸರು ಅವಕಾಶ ನೀಡಲಿಲ್ಲ. ಆದರೂ ಪೊಲೀಸರು ವಾಪಸ್ ಕರೆದೊಯ್ಯುತ್ತಿದ್ದ ವೇಳೆ, ನನ್ನ ಇಡೀ ಕುಟುಂಬ ಮುಗಿಸಲು ಸಂಚು ರೂಪಿಸಲಾಗಿದೆ. ನನ್ನ ವಿರುದ್ಧ ನಕಲಿ ಕೇಸ್ ದಾಖಲಿಸಲಾಗಿದೆ ಎಂದು ಕೂಗಿ ಹೇಳಿದರು.
'ಇದೇಲ್ಲವ್ವನ್ನೂ ಕುಲದೀಪ್ ಸಿಂಗ್ ಸೆಂಗರ್ ಮಾಡುತ್ತಿದ್ದು, ನನ್ನ ಬಳಿ ಎಲ್ಲಾ ಸಾಕ್ಷ್ಯಗಳು ಇವೆ' ಮಹೇಶ್ ಸಿಂಗ್ ಹೇಳಿದ್ದಾರೆ.
ಅತ್ಯಾಚಾರ ಸಂತ್ರಸ್ತೆ ಹಾಗೂ ಆಕೆಯ ವಕೀಲರು ತೆರಳುತ್ತಿದ್ದ ಕಾರಿಗೆ ಲಾರಿ ಡಿಕ್ಕಿಯಾಗಿದ್ದು, ಭೀಕರ ಅಪಘಾತದಲ್ಲಿ ಮಹೇಶ್ ಸಿಂಗ್ ಪತ್ನಿ ಸೇರಿದಂತೆ ಇಬ್ಬರು ಮಹಿಳೆಯರು ಮೃತಪಟ್ಟಿದ್ದರು. ಗಂಭೀರವಾಗಿ ಗಾಯಗೊಂಡಿರುವ ಅತ್ಯಾಚಾರ ಸಂತ್ರಸ್ತೆ ಹಾಗೂ ವಕೀಲೆ ಲಖನೌ ಆಸ್ಪತ್ರೆಯ ಚಿಕಿತ್ಸೆ ಪಡೆಯುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

BJP-RSS ನಡುವೆ ಬಿರುಕು: ಸ್ಫೋಟಕ ಕಾರಣ ಬಿಚ್ಚಿಟ್ಟ ಅಭಿಜೀತ್ ದೀಪ್ಕೆ

ಜಾರ್ಖಂಡ್‌ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಹೋರಾಗಾರ್ತಿಗೆ 38 ಮಂದಿ ಲೈಂಗಿಕ ಕಿರುಕುಳ: ಎಫ್‌ಐಆರ್‌ ದಾಖಲು, ‘JMM ಗೂಂಡಾಗಳ’ ಕೃತ್ಯ ಎಂದ ಬಿಜೆಪಿ

SIR ವಿರುದ್ಧ 'ಚುನಾವಣಾ ಆಯೋಗ ಚಲೋ' ಘೋಷಿಸಿದ ಪ್ರಕಾಶ್ ರಾಜ್; ಆಯುಕ್ತರ ರಾಜೀನಾಮೆಗೆ ಆಗ್ರಹ