ರಾಹುಲ್ ಗಾಂಧಿ 
ದೇಶ

ಲೋಕಸಭೆ: ಶಾ, ಇರಾನಿ, ಸೋನಿಯಾಗೆ ಮೊದಲ ಸಾಲಿನಲ್ಲಿ ಆಸನ: ರಾಹುಲ್ ಗೆ 2 ನೇ ಸಾಲಿನ ಹಳೆಯ ಸೀಟು

ಲೋಕಸಭೆಯಲ್ಲಿ ಇದೇ ಮೊದಲ ಬಾರಿಗೆ ಗೆದ್ದಿರುವ ಅಮಿತ್ ಶಾ, ರವಿಶಂಕರ್ ಪ್ರಸಾದ್ ಹಾಗೂ ಸ್ಮೃತಿ ಇರಾನಿ ಅವರಿಗೆ ಯುಪಿಎ ಅಧಿನಾಯಕಿ ಸೋನಿಯಾಗಾಂಧಿ ಜೊತೆಗೆ ಮೊದಲ ಸಾಲಿನಲ್ಲಿ ಕೂರುವ ಆಸನದ ವ್ಯವಸ್ಥೆ ಮಾಡಲಾಗಿದೆ.

ನವದೆಹಲಿ: ಲೋಕಸಭೆಯಲ್ಲಿ ಇದೇ ಮೊದಲ ಬಾರಿಗೆ ಗೆದ್ದಿರುವ ಅಮಿತ್ ಶಾ, ರವಿಶಂಕರ್ ಪ್ರಸಾದ್ ಹಾಗೂ ಸ್ಮೃತಿ ಇರಾನಿ ಅವರಿಗೆ ಯುಪಿಎ ಅಧಿನಾಯಕಿ ಸೋನಿಯಾಗಾಂಧಿ ಜೊತೆಗೆ ಮೊದಲ ಸಾಲಿನಲ್ಲಿ ಕೂರುವ ಆಸನದ ವ್ಯವಸ್ಥೆ ಮಾಡಲಾಗಿದೆ.  ಆದರೆ, ಮೂರನೇ ಬಾರಿಗೆ ಗೆಲುವು ಸಾಧಿಸಿರುವ ರಾಹುಲ್ ಗಾಂಧಿಗೆ  ಎರಡನೇ ಸಾಲಿನಲ್ಲಿ ಹಳೆಯ ಸೀಟನ್ನು ನೀಡಲಾಗಿದೆ.
ಸ್ಪೀಕರ್ ಓಂ ಬಿರ್ಲಾ ಇಂದು ಆಸನಗಳನ್ನು ಹಂಚಿಕೆ ಮಾಡಿದ್ದು, ರಕ್ಷಣಾ ಸಚಿವ ರಾಜನಾಥ್ ಸಿಂಗ್, ನಿತಿನ್ ಗಡ್ಕರಿ, ಸದಾನಂದಗೌಡ, ನರೇಂದ್ರ ಸಿಂಗ್ ತೋಮರ್, ಅರ್ಜುನ್ ಮುಂಡಾ ಮತ್ತು ಅರವಿಂದ್ ಸಾವಂತ್ ಅವರಿಗೂ ಮೊದಲ ಸಾಲಿನಲ್ಲಿ ಆಸನದ ಹಂಚಿಕೆ ಮಾಡಲಾಗಿದೆ. 
ಪ್ರತಿಪಕ್ಷಗಳ ಸಾಲಿನಲ್ಲಿ ಕಾಂಗ್ರೆಸ್ ನಾಯಕ ಅಧಿರ್ ರಂಜನ್ ಚೌದರಿ, ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಹಾಗೂ ಡಿಎಂಕೆ ಮುಖಂಡ ಟಿಆರ್ ಬಾಲು ಅವರಿಗೆ ಮೊದಲ ಸಾಲಿನಲ್ಲಿ ಆಸನ ನೀಡಲಾಗಿದೆ.
 ಈ ಹಿಂದೆ ರಾಜ್ಯಸಭೆ ಸದಸ್ಯೆಯಾಗಿ ಈ ಬಾರಿ ಲೋಕಸಭೆಗೆ ಮೊದಲ ಬಾರಿಗೆ ಪ್ರವೇಶಿಸಿರುವ ಸ್ಮೃತಿ ಇರಾನಿಗೆ ಮೊದಲ ಸಾಲಿನಲ್ಲಿ ಆಸನ ನೀಡಲಾಗಿದೆ.  ಶಾ ಹಾಗೂ ರವಿಶಂಕರ್ ಪ್ರಸಾದ್ ಅವರಿಗೆ ಈ ಹಿಂದೆ ಮೇಲ್ಮನೆಯಲ್ಲೂ ಮೊದಲ ಸಾಲಿನಲ್ಲಿ ಆಸನದ ವ್ಯವಸ್ಥೆ ಮಾಡಲಾಗಿತ್ತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಿಯೆಟ್ನಾಂ ದೋಣಿ ದುರಂತ: 15 ಭಾರತೀಯ ಪ್ರವಾಸಿಗರು ಸಾವು; ತಮಿಳುನಾಡು, ಆಂಧ್ರ ಮಂದಿ ಸಮುದ್ರಪಾಲು; Video

HMT ಆದಾಗ ನಾನು ಹುಟ್ಟಿರ್ಲಿಲ್ಲ, ನೀವೇನು? ಅರಣ್ಯ ಭೂಮಿ ಅಂತ ದಾಖಲೆ ತೋರಿಸಿ ಕುಮಾರಸ್ವಾಮಿಗೆ ಈಶ್ವರ್ ಖಂಡ್ರೆ ಟಾಂಗ್

ಪಾಕ್ ಉಗ್ರರ ರಣಬೇಟೆ: ಬಲೂಚಿಸ್ತಾನದಲ್ಲಿ 88 ಭಯೋತ್ಪಾದಕರ ಹತ್ಯೆ!

'10 Snakes' ಪೋಸ್ಟ್ ಗೆ ಶ್ರೇಷ್ಠ ಅಯ್ಯರ್‌ ಲೈಕ್, ಭಾರಿ ವಿವಾದಕ್ಕೆ ಗುರಿಯಾದ ಶ್ರೇಯಸ್ ಅಯ್ಯರ್! ನೆಟ್ಟಿಗರು ತೀವ್ರ ಚರ್ಚೆ

INS Mahendragiri: ಪ್ರಾಜೆಕ್ಟ್ 17A; ಕೇವಲ 18 ತಿಂಗಳಲ್ಲಿ 6ನೇ ಯುದ್ಧನೌಕೆ ನೌಕಾಪಡೆಗೆ ಸೇರ್ಪಡೆ; Video