ರಾಂಚಿಯಲ್ಲಿ ವಿಶ್ವ ಯೋಗ ದಿನಾಚರಣೆ ಪ್ರಧಾನ ಸಮಾರಂಭ, ಪ್ರಧಾನಿ ಮೋದಿ ಭಾಗಿ
ಜೂನ್ 21 ರಂದು ರಾಂಚಿಯಲ್ಲಿ ನಡೆಯಲಿರುವ ವಿಶ್ವ ಯೋಗ ದಿನಾಚರಣೆಯ ಪ್ರಧಾನ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳಲಿದ್ದಾರೆ ಎಂದು ಅಧಿಕೃತ ಮೂಲಗಳಿಂದ ತಿಳಿದುಬಂದಿದೆ.
ರಾಂಚಿ: ಜೂನ್ 21 ರಂದು ರಾಂಚಿಯಲ್ಲಿ ನಡೆಯಲಿರುವ ವಿಶ್ವ ಯೋಗ ದಿನಾಚರಣೆಯ ಪ್ರಧಾನ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳಲಿದ್ದಾರೆ ಎಂದು ಅಧಿಕೃತ ಮೂಲಗಳಿಂದ ತಿಳಿದುಬಂದಿದೆ.
ನರೇಂದ್ರ ಮೋದಿ ಪ್ರಧಾನಿಯಾಗಿ ಎರಡನೇ ಬಾರಿಗೆ ಅಧಿಕಾರ ಸ್ವೀಕರಿಸಿದ ಬಳಿಕ ಇದು ಮೊದಲ ಸರ್ಕಾರಿ ಬೃಹತ್ ಸಾರ್ವಜನಿಕ ಕಾರ್ಯಕ್ರಮವಾಗಿದೆ.
ವಿಶ್ವ ಯೋಗ ದಿನಾಚರಣೆ ಪ್ರಧಾನ ಸಮಾರಂಭ ಆಯೋಜನೆಗಾಗಿ ದೆಹಲಿ, ಶಿಮ್ಲಾ, ಮೈಸೂರು, ಅಹಮದಾಬಾದ್ ಮತ್ತು ರಾಂಚಿಯ ಹೆಸರನ್ನು ಪಟ್ಟಿ ಮಾಡಿ,ಆಯುಷ್ ಸಚಿವಾಲಯ ಪ್ರಧಾನಿ ಇಲಾಖೆಗೆ ಕಳುಹಿಸಿತ್ತು. ಪ್ರಧಾನಿ ಕಾರ್ಯಾಲಯ ರಾಂಚಿಯನ್ನು ಅಂತಿಮವಾಗಿ ಆಯ್ಕೆ ಮಾಡಿದೆ ಎಂದು ಅಧಿಕೃತ ಮೂಲಗಳಿಂದ ತಿಳಿದುಬಂದಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.