ದೇಶ

ಮತ್ತೆ ಎನ್ ಡಿಎ ಮೈತ್ರಿಕೂಟದಿಂದ ಜೆಡಿಯು ಹೊರಕ್ಕೆ?: ನಿತೀಶ್ ಕುಮಾರ್ ಹೇಳಿದ್ದೇನು?

Srinivas Rao BV
ಪಾಟ್ನಾ: ಮೋದಿ ಸರ್ಕಾರದ ಸಚಿವ ಸಂಪುಟದಲ್ಲಿ ಜೆಡಿಯು ಪಕ್ಷಕ್ಕೆ ಸೂಕ್ತ ಪ್ರಾತಿನಿಧ್ಯ ದೊರೆತಿಲ್ಲ ಎಂಬ ಅಸಮಾಧಾನವನ್ನು ಜೆಡಿಯು ನಾಯಕರು ಬಹಿರಂಗಪಡಿಸಿದ್ದಾರೆ. 
ಸ್ವಂತ ಬಲದ ಮೇಲೆ ಸರ್ಕಾರ ರಚನೆ ಮಾಡಿರುವ ಬಿಜೆಪಿ ಮಂತ್ರಿಮಂಡಲ ರಚನೆ ವೇಳೆ ಎನ್ ಡಿಎ ಮೈತ್ರಿಕೂಟದ ಪಕ್ಷಗಳನ್ನು ಕಡೆಗಣಿಸುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಈ ನಡುವೆ ಬಿಹಾರದಲ್ಲಿ ಬಿಜೆಪಿ ಜೊತೆ ಮೈತ್ರಿ ಸರ್ಕಾರ ನಡೆಸಿತ್ತಿರುವ ನಿತೀಶ್ ಕುಮಾರ್ ನೇತೃತ್ವದ ಜೆಡಿಯು, ಕೇಂದ್ರ ಸಚಿವ ಸಂಪುಟದಲ್ಲಿ ಸೂಕ್ತ ಪ್ರಾತಿನಿಧ್ಯ ದೊರೆಯದ ಹಿನ್ನೆಲೆಯಲ್ಲಿ ಎನ್ ಡಿಎ ಮೈತ್ರಿಕೂಟ ತೊರೆಯುತ್ತದೆ ಎಂಬ ವರದಿಗಳು ಪ್ರಕಟವಾಗಿತ್ತು. 
ಇದಕ್ಕೆ ಪೂರಕವಾಗಿ ನಿತೀಶ್ ಕುಮಾರ್ ರಾಜ್ಯ ಮಂತ್ರಿಮಂಡಲ ವಿಸ್ತರಣೆ ವೇಳೆ ಬಿಜೆಪಿ ಪ್ರಾತಿನಿಧ್ಯ ಸಂಖ್ಯೆಯನ್ನು ಒಂದಕ್ಕೆ ಇಳಿಕೆ ಮಾಡಿದ್ದಾರೆ. ಈ ಬೆಳವಣಿಗೆ ಬೆನ್ನಲ್ಲೇ ಜೆಡಿಯು ಎನ್ ಡಿಎ ಮೈತ್ರಿಕೂಟವನ್ನು ತೊರೆಯಲಿದೆ ಎಂಬ ವರದಿ ಪ್ರಕಟವಾಗಿತ್ತು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ನಿತೀಶ್ ಕುಮಾರ್ ಮೈತ್ರಿಕೂಟಕ್ಕೆ ಸಮಾನ ಪ್ರಾತಿನಿಧ್ಯವಿರಬೇಕಿತ್ತು. ಆದರೆ ಜೇಡಿಯು ಇನ್ನು ಮುಂದಿನ ದಿನಗಳಲ್ಲಿ ನಾವು ಕೇಂದ್ರ ಮಂತ್ರಿ ಮಂಡಲಕ್ಕೆ ಸೇರ್ಪಡೆಯಾಗುವುದಿಲ್ಲ ಎಂಬುದನ್ನು ಪಕ್ಷದ ರಾಷ್ಟ್ರಾಧ್ಯಕ್ಷನಾಗಿ ಸ್ಪಷ್ಟಪಡಿಸುತ್ತೇನೆ ಎಂದು ನಿತೀಶ್ ಕುಮಾರ್ ಹೇಳಿದ್ದಾರೆ. 
ಕೇಂದ್ರದಲ್ಲಿ ಜೆಡಿಯುಗೆ ಒಂದು ಸಚಿವ ಸ್ಥಾನ ನೀಡುವುದಾಗಿ ನನಗೆ ಹೇಳಿದಾಗ, ನಮಗೆ ಬೇಕಿಲ್ಲ, ಆದರೆ ಪಕ್ಷವನ್ನು ಕೇಳುತ್ತೇನೆ ಎಂದು ಹೇಳಿದ್ದೆ. ನಾನು ಪಕ್ಷದ ನಾಯಕರ ಅಭಿಪ್ರಾಯ ಸಂಗ್ರಹಣೆ ಮಾಡಿದೆ, ನಾವು ಒಗ್ಗಟ್ಟಿನಿಂದ ಇರಬೇಕಾದರೆ ಕೇವಲ ಸಾಂಕೇತಿಕ ಪ್ರಾತಿನಿಧ್ಯ ಬೇಕಿಲ್ಲ ಎಂಬ ಅಭಿಪ್ರಾಯ ವ್ಯಕ್ತವಾಯಿತು, ನಮಗೆ ಅಸಮಾಧಾನವಿಲ್ಲ. ನಾವು ಒಗ್ಗಟ್ಟಿನಿಂದ ಇದ್ದೇವೆ ಎಂದು ನಿತೀಶ್ ಕುಮಾರ್ ಹೇಳಿದ್ದಾರೆ. 
SCROLL FOR NEXT