ಕಚೇರಿ ವಾರ್: ಬಿಜೆಪಿ ಕಚೇರಿಯ ಬಾಗಿಲು ಮುರಿದು ಟಿಎಂಸಿ ಚಿಹ್ನೆ ಬಿಡಿಸಿದ ಮಮತಾ ಬ್ಯಾನರ್ಜಿ 
ದೇಶ

ಕಚೇರಿ ವಾರ್: ಬಿಜೆಪಿ ಕಚೇರಿಯ ಬಾಗಿಲು ಮುರಿದು ಟಿಎಂಸಿ ಚಿಹ್ನೆ ಬಿಡಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ-ಟಿಎಂಸಿ ಕಾರ್ಯಕರ್ತರ ನಡುವೆ ಕಚೇರಿ ವಶಪಡಿಸಿಕೊಂಡಿರುವ ಆರೋಪ ಪ್ರತ್ಯಾರೋಪ ಕೇಳಿಬಂದಿದ್ದು...

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ-ಟಿಎಂಸಿ ಕಾರ್ಯಕರ್ತರ ನಡುವೆ ಕಚೇರಿ ವಶಪಡಿಸಿಕೊಂಡಿರುವ ಆರೋಪ  ಪ್ರತ್ಯಾರೋಪ ಕೇಳಿಬಂದಿದ್ದು, ಸಿಎಂ ಮಮತಾ ಬ್ಯಾನರ್ಜಿ ಸ್ವತಃ ಬಿಜೆಪಿ ಕಚೇರಿಯ ಬಾಗಿಲು ಮುರಿದು ಅಲ್ಲಿ ಟಿಎಂಸಿ ಚಿಹ್ನೆ ಬಿಡಿಸಿ ಬಂದಿದ್ದಾರೆ. 
ಕಚೇರಿಯ ಕೇಸರಿ ಬಣ್ಣದ ಗೋಡೆಯ ಮೇಲೆ ತೃಣಮೂಲ ಕಾಂಗ್ರೆಸ್ ನ ಚಿಹ್ನೆಯನ್ನು ಬರೆದಿದ್ದಾರೆ ಮಮತಾ ಬ್ಯಾನರ್ಜಿ, ಇದಕ್ಕೂ ಮುನ್ನ ತೃಣ ಮೂಲ ಕಾಂಗ್ರೆಸ್ ನ ಕಾರ್ಯಕರ್ತರು ತಮ್ಮ ಕಚೇರಿಯನ್ನು ಪಶ್ಚಿಮ ಬಂಗಾಳದಲ್ಲಿ ಹೊಸದಾಗಿ ಆಯ್ಕೆಗೊಂಡ ಸಂಸದ ಅರ್ಜುನ್ ಸಿಂಗ್ ಅವರ ಬೆಂಬಲಿಗರು ವಶಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿದ್ದರು. ಲೋಕಸಭಾ ಚುನಾವಣೆ ಫಲಿತಾಂಶ ಬಂದ ನಂತರ ಈ ಘಟನೆ ನಡೆದಿದ್ದು, ಮಮತಾ ಬ್ಯಾನರ್ಜಿ ಕಾರ್ಯಕರ್ತರನ್ನುದ್ದೇಶಿಸಿ ಬಿಜೆಪಿ ಕಚೇರಿಗೆ ತೆರಳಿ, ಬಿಜೆಪಿ ಚಿಹ್ನೆಯನ್ನು ತೆಗೆದು ಟಿಎಂಸಿ ಚಿಹ್ನೆಯನ್ನು ಬರೆದಿದ್ದಾರೆ ಎಂದು ವರದಿ ಪ್ರಕಟವಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್