ಪ್ರಧಾನಿ ಮೋದಿ 
ದೇಶ

ವಿದೇಶ ಪ್ರವಾಸಕ್ಕೆ ಪ್ರಧಾನಿ ಮೋದಿ ಸಜ್ಜು: ಶೀಘ್ರದಲ್ಲೇ ಮಾಲ್ಡೀವ್ಸ್, ಶ್ರೀಲಂಕಾಗೆ ಪ್ರಯಾಣ

ಪ್ರಧಾನಿ ನರೇಂದ್ರ ಮೋದಿ ಅವರು ಎರಡನೇ ಅವಧಿಗೆ ದೇಶದ ಪ್ರಧಾನಿಯಾಗಿ ಆಯ್ಕೆಯಾದ ನಂತರ, ಇದೇ ಮೊದಲ ಬಾರಿಗೆ ವಿದೇಶ ಪ್ರವಾಸಕ್ಕೆ ಪ್ರಯಾಣ ಬೆಳೆಸಲು ಸಜ್ಜಾಗಿದ್ದಾರೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಎರಡನೇ ಅವಧಿಗೆ ದೇಶದ ಪ್ರಧಾನಿಯಾಗಿ ಆಯ್ಕೆಯಾದ ನಂತರ, ಇದೇ ಮೊದಲ ಬಾರಿಗೆ ವಿದೇಶ ಪ್ರವಾಸಕ್ಕೆ ಪ್ರಯಾಣ ಬೆಳೆಸಲು ಸಜ್ಜಾಗಿದ್ದಾರೆ.
ರಿಪಬ್ಲಿಕ್ ಆಫ್ ಮಾಲ್ಡೀವ್ಸ್ ನ ಅಧ್ಯಕ್ಷ ಇಬ್ರಾಹಿಂ ಮೊಹಮ್ಮದ್ ಸೋಲಿಹ್ ಅವರ ಆಹ್ವಾನದ ಮೇರೆಗೆ ಮೋದಿ, ಜೂನ್ 8ರಿಂದ ಎರಡು ದಿನಗಳ ಕಾಲ ಪ್ರಯಾಣ ಬೆಳೆಸಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.
2018ರಲ್ಲಿ ಸೋಲಿಹ್ ಅವರು ಭಾರತಕ್ಕೆ ಭೇಟಿ ನೀಡಿದ್ದರು. ಮೋದಿ ಅವರ ಈ ಭೇಟಿಯಿಂದ ಉಭಯ ರಾಷ್ಟ್ರಗಳ ನಡುವಿನ ದ್ವಿಪಕ್ಷೀಯ ಬಾಂಧವ್ಯ ವೃದ್ಧಿಗೆ ನೆರವಾಗುತ್ತದೆ. ಮೋದಿ  ಹಿಂದಿನ ದ್ವಿಪಕ್ಷೀಯ ಒಪ್ಪಂದಗಳ ಸ್ಥಿತಿಗತಿಗಳನ್ನು ಪರಿಶೀಲಿಸಲಿದ್ದಾರೆ ಎಂದು ಸಚಿವಾಲಯ ತಿಳಿಸಿದೆ.
ನಂತರ, ಮೋದಿ ಜೂನ್ 9ರಂದು ಶ್ರೀಲಂಕಾಕ್ಕೆ ಭೇಟಿ ನೀಡಲಿದ್ದಾರೆ. ಶ್ರೀಲಂಕಾ ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ ಅವರ ಆಹ್ವಾನದ ಮೇರೆಗೆ ಈ ಭೇಟಿ ನಿಗದಿಪಡಿಸಲಾಗಿದೆ. ಈ ಎರಡೂ ದೇಶಗಳ ಭೇಟಿ, ಭಾರತದ ಪ್ರಧಾನ ಆದ್ಯತೆಯಾದ ‘ನೆರೆಹೊರೆಯವರು ಪ್ರಥಮ’ ನೀತಿಗೆ ಪೂರಕವಾಗಿದೆ ಎಂದು ಹೇಳಿಕೆ ತಿಳಿಸಿದೆ.
2014ರಲ್ಲಿ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ನಂತರ, ಪ್ರಧಾನಿ ಮೋದಿ ಪ್ರಥಮ ಬಾರಿಗೆ ಭೂತಾನ್ ದೇಶಕ್ಕೆ ಭೇಟಿ ನೀಡಿದ್ದರು.ನಂತರ, ಬ್ರೆಜಿಲ್, ನೇಪಾಳಕ್ಕೆ ಪ್ರಯಾಣ ಬೆಳೆಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT