ದೇಶ

ರಾಮಮಂದಿರಕ್ಕಾಗಿ ಅಯೋಧ್ಯೆಯಲ್ಲಿ ಭೂಮಿ ಮೀಸಲಿಡಿ: ಮೋದಿಗೆ ಸುಬ್ರಮಣಿಯನ್ ಸ್ವಾಮಿ ಆಗ್ರಹ

Shilpa D
ನವದೆಹಲಿ:  ರಾಮಮಂದಿರ ನಿರ್ಮಾಣಕ್ಕಾಗಿ ಅಯೋಧ್ಯೆಯಲ್ಲಿ ಭೂಮಿ ನಿಗದಿಪಡಿಸುವಂತೆ ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಪ್ರಧಾನಿ ನರೇಂದ್ರ ಮೋದಿಗೆ ಆಗ್ರಹಿಸಿದ್ದಾರೆ. 
ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವ ಸ್ವಾಮಿ, ರಾಮಸೇತು ರಾಷ್ಟ್ರೀಯ ಪಾರಂಪರಿಕ ಸ್ಮಾರಕ ಎಂದು ಘೋಷಿಸಲು ಒತ್ತಾಯಿಸಿದ್ದಾರೆ. ದೇವಾಲಯ ನಿರ್ಮಾಣಕ್ಕಾಗಿ ಭೂಮಿ ಗೊತ್ತು ಪಡಿಸಲು ಸುಪ್ರೀಂಕೋರ್ಟ್ ನ ಅನುಮತಿ ಅವಶ್ಯಕತೆಯಿಲ್ಲ ಎಂದು ಹೇಳಿದ್ದಾರೆ.
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡುವ ವಿಚಾರ ಪ್ರಕರಣ ಸುಪ್ರೀಂಕೋರ್ಟ್ ನಲ್ಲಿದೆ, ವಿವಾದಿತವಲ್ಲದ 67 ಎಕರೆ ಭೂಮಿಯನ್ನು ರಾಮಜನ್ಮ ಭೂಮಿ ವ್ಯಾಸ್ ಸಮಿತಿಗೆ ಒಪ್ಪಿಸಬೇಕು ಎಂದು ಕೇಂದ್ರ ಸರ್ಕಾರ ಸುಪ್ರಿಂ ಕೋರ್ಟ್ ಗೆ ಮನವಿ ಸಲ್ಲಿಸಿತ್ತು.
SCROLL FOR NEXT