ಸಂಗ್ರಹ ಚಿತ್ರ 
ದೇಶ

ಸ್ಥಳೀಯ ಸಂಸ್ಥೆ ಚುನಾವಣೆ: ಬಂಗಾಳದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಬಿಜೆಪಿ ಪಾರಮ್ಯ

ಪಶ್ಚಿಮ ಬಂಗಾಳದಲ್ಲಿ ನಡೆದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಇದೇ ಮೊದಲ ಬಾರಿಗೆ ಬಿಜೆಪಿ ಪಕ್ಷ ಪಾರಮ್ಯ ಮೆರೆದಿದ್ದು, ಸಿಎಂ ಮಮತಾ ಬ್ಯಾನರ್ಜಿಗೆ ತೀವ್ರ ಮುಖಭಂಗಲಾಗಿದೆ.

ಕೋಲ್ಕತಾ: ಪಶ್ಚಿಮ ಬಂಗಾಳದಲ್ಲಿ ನಡೆದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಇದೇ ಮೊದಲ ಬಾರಿಗೆ ಬಿಜೆಪಿ ಪಕ್ಷ ಪಾರಮ್ಯ ಮೆರೆದಿದ್ದು, ಸಿಎಂ ಮಮತಾ ಬ್ಯಾನರ್ಜಿಗೆ ತೀವ್ರ ಮುಖಭಂಗಲಾಗಿದೆ.
ಲೋಕಸಭಾ ಚುನಾವಣೆ ಬಳಿಕ ಬಂಗಾಳದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲೂ ಬಿಜೆಪಿ ತನ್ನ ಸಾಮರ್ಥ್ಯ ಹೆಚ್ಚಿಸಿಕೊಂಡಿದ್ದು, ಒಟ್ಟು 34 ವಾರ್ಡ್ ಗಳ ಪೈಕಿ 26 ಕೌನ್ಸಿಲರ್ ಗಳು ಬಿಜೆಪಿ ಪರ ಮತ ನೀಡಿದ್ದು, 8 ಮಂದಿ ಕೌನ್ಸಿಲರ್ ಗಳು ಮತದಾನದಿಂದ ದೂರ ಉಳಿಯುವ ಮೂಲಕ ಪರೋಕ್ಷವಾಗಿ ಬಿಜೆಪಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ. ಆ ಮೂಲಕ ಬಂಗಾಳದಲ್ಲಿ ಇದೇ ಮೊದಲ ಬಾರಿಗೆ ಸ್ಥಳೀಯ ಸಂಸ್ಥೆಗಳಲ್ಲಿ ಬಿಜೆಪಿ ಆಡಳಿತ ಆರಂಭವಾಗಲಿದೆ. 
ಅಂತೆಯೇ ಆಡಳಿತಾ ರೂಢ ತೃಣಮೂಲ ಕಾಂಗ್ರೆಸ್, ಹಾಗೂ ಸಿಎಂ ಮಮತಾ ಬ್ಯಾನರ್ಜಿ ಅವರಿಗೆ ತೀವ್ರ ಮುಖಭಂಗವಾದಂತಾಗಿದೆ. ಇಲ್ಲಿನ ಭಾತ್ ಪಾರಾ ಮುನ್ಸಿಪಾಲಿಟಿಯಲ್ಲಿ ಬಿಜೆಪಿ ಗೆಲ್ಲುವ ಮೂಲಕ ಟಿಎಂಸಿಯಿಂದ ಅಧಿಕಾರ ಕಸಿದಿದೆ. ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಬರಾಕ್ ಪೋರ್ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಅರ್ಜುನ್ ಸಿಂಗ್ ಅವರ ಸಹೋದರ ಸೌರವ್ ಸಿಂಗ್ ಇಲ್ಲಿ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಈ ಹಿಂದೆ ಅರ್ಜುನ್ ಸಿಂಗ್ ನಾಲ್ಕು ಬಾರಿ ಟಿಎಂಸಿ ಪಕ್ಷದ ಮೂಲಕ ಸಂಸತ್ ಗೆ ಆಯ್ಕೆಯಾಗಿದ್ದರು. ಆದರೆ ಬದಲಾದ ಸ್ಥಿತಿಯಲ್ಲಿ ಇತ್ತೀಚೆಗಷ್ಟೇ ಅವರು ಬಿಜೆಪಿ ಸೇರ್ಪಡೆಯಾಗಿ ಸ್ಪರ್ಧಿಸಿ ಗೆದ್ದಿದ್ದರು.
ಅಲ್ಲದೆ 2010ರಿಂದಲೂ ಇದೇ ಅರ್ಜುನ್ ಸಿಂಗ್ ಭಾತ್ ಪಾರಾ ಮುನ್ಸಿಪಾಲಿಟಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT