ವಿಶ್ವ ಯೋಗದಿನಕ್ಕಾಗಿ,ಆ್ಯನಿಮೇಟೆಡ್ ವಿಡಿಯೋದಲ್ಲಿ ಪ್ರಧಾನಿ ತ್ರಿಕೋನಾಸನ 
ದೇಶ

ವಿಶ್ವ ಯೋಗದಿನಕ್ಕಾಗಿ, ಆ್ಯನಿಮೇಟೆಡ್ ವಿಡಿಯೋದಲ್ಲಿ ಪ್ರಧಾನಿ ತ್ರಿಕೋನಾಸನ!

'ಯೋಗ' ಮಾನವ ಜೀವನದ ಸಮಗ್ರ ಭಾಗವಾಗಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಪ್ರತಿಪಾದಿಸಿದ್ದಾರೆ.

ನವದೆಹಲಿ: 'ಯೋಗ' ಮಾನವ ಜೀವನದ ಸಮಗ್ರ ಭಾಗವಾಗಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಪ್ರತಿಪಾದಿಸಿದ್ದಾರೆ. 
ಇದೇ 21 ರಂದು ನಡೆಯಲಿರುವ ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ತಾವು ತ್ರಿಕೋನಾಸನ ಮಾಡುತ್ತಿರುವ ಅನಿಮೇಟೆಡ್ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ಯೋಗದ ಮಹತ್ವವನ್ನು ಒತ್ತಿ ಹೇಳಿದ್ದಾರೆ. 
ಅವರು ಕಳದೆ ವರ್ಷವೂ ಸಹ ಇದೇ ರೀತಿ ಯೋಗ ಮಾಡುವ ವಿಡಿಯೋ ಸಂದೇಶವನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಜನರಲ್ಲಿ ಅರಿವು ಮೂಡಿಸಿದ್ದರು. 
ಈ ಬಾರಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಧಾನ ಸಮಾರಂಭ ರಾಂಚಿಯಲ್ಲಿ ನಡೆಯಲಿದ್ದು ಅದರಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಲಿದ್ದಾರೆ. ಇದಕ್ಕೂ ಮೊದಲು ಕೇಂದ್ರ ಆಯುಷ್ ಇಲಾಖೆ ದೆಹಲಿ, ಶಿಮ್ಲಾ, ಅಹಮದಾಬಾದ್, ಮೈಸೂರು ಮತ್ತು ರಾಂಚಿ ಈಐದು ನಗರಗಳನ್ನು ತಾತ್ಕಾಲಿಕವಾಗಿ ಗುರುತಿಸಿ ಇದರಲ್ಲಿ ಯಾವುದಾದರೂ ಒಂದು ಸ್ಥಳವನ್ನು ಆಯ್ಕೆ ಮಾಡುವ ಅವಕಾಶವನ್ನು ಪ್ರಧಾನಿ ಕಾರ್ಯಾಲಯಕ್ಕೆ ನೀಡಿತ್ತು. 
ಅವರ ಪ್ರಯತ್ನದ ಫಲದಿಂದಲೇ ವಿಶ್ವಸಂಸ್ಥೆ ಪ್ರತಿ ವರ್ಷ ಜೂನ್ 21 ಅನ್ನು ಅಂತಾರಾಷ್ಟ್ರೀಯ ಯೋಗ ದಿನವನ್ನಾಗಿ ಘೋಷಿಸಿದೆ. ಭಾರತ ಮಾತ್ರವಲ್ಲದೆ ವಿಶ್ವದ 135 ಹೆಚ್ಚು ರಾಷ್ಟ್ರಗಳು ಈ ದಿನವನ್ನು ಯೋಗ ದಿನವೆಂದು ಆಚರಿಸಿಕೊಂಡು ಬರುತ್ತಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT