ಸಂಗ್ರಹ ಚಿತ್ರ 
ದೇಶ

ಜಿ-20 ದೇಶಗಳ ವಿತ್ತ ಸಚಿವರ ಸಭೆಗೆ ನಿರ್ಮಲಾ ಸೀತಾರಾಮನ್ ಭಾಗಿ

ಜಪಾನ್ ನಲ್ಲಿ ನಡೆಯಲಿರುವ ಜಿ20 ಶೃಂಗಸಭೆಯಲ್ಲಿ ಜಿ20 ರಾಷ್ಟ್ರಗಳ ವಿತ್ತ ಸಚಿವರ ಸಭೆಯಲ್ಲಿ ಭಾರತ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಪಾಲ್ಗೊಳ್ಳಲ್ಲಿದ್ದಾರೆ ಎಂದು ತಿಳಿದುಬಂದಿದೆ.

ನವದೆಹಲಿ: ಜಪಾನ್ ನಲ್ಲಿ ನಡೆಯಲಿರುವ ಜಿ20 ಶೃಂಗಸಭೆಯಲ್ಲಿ ಜಿ20  ರಾಷ್ಟ್ರಗಳ ವಿತ್ತ ಸಚಿವರ ಸಭೆಯಲ್ಲಿ ಭಾರತ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಪಾಲ್ಗೊಳ್ಳಲ್ಲಿದ್ದಾರೆ ಎಂದು ತಿಳಿದುಬಂದಿದೆ.
ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ಜೂನ್ 8 ರಿಂದ ಜಪಾನ್ ನಲ್ಲಿ ಆರಂಭಗೊಳ್ಳಲಿರುವ ಜಿ- 20 ದೇಶಗಳ ಹಣಕಾಸು ಸಚಿವರ ಹಾಗೂ ಕೇಂದ್ರೀಯ ಬ್ಯಾಂಕ್ ಗವರ್ನರ್ ಗಳ ಎರಡು ದಿನಗಳ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ. ಹಣಕಾಸು ಸಚಿವರಾಗಿ ಅಧಿಕಾರ ಸ್ವೀಕರಿಗಿಸಿದ ಬಳಿಕ ನಿರ್ಮಲಾ ಸೀತಾರಾಮನ್ ಅವರು ಇದೇ ಮೊದಲ ವಿದೇಶ ಯಾತ್ರೆ ಮಾಡುತ್ತಿದ್ದು, ಇದು ಅವರ ಅಧಿಕೃತ ಮೊದಲ ಸಭೆಯಾಗಿದೆ.
ದೇಶದ ಪೂರ್ಣ ಪ್ರಮಾಣದ ಮೊದಲ ಮಹಿಳಾ ಹಣಕಾಸು ಸಚಿವರಾಗಿ ಕಳೆದ ವಾರ ಅಧಿಕಾರ ವಹಿಸಿಕೊಂಡ ನಿರ್ಮಲಾ ಸೀತಾರಾಮನ್, ಆರ್ ಬಿ ಐ ಗೌರ್ವನರ್ ಶಕ್ತಿಕಾಂತ ದಾಸ್ ಅವರೊಂದಿಗೆ ಜಪಾನ್ ನ ಫುಕೋಕಾ ದಲ್ಲಿ ನಡೆಯಲಿರುವ ಸಭೆಯಲ್ಲಿ ಪಾಲ್ಗೊಳ್ಳುವ ಸಾಧ್ಯತೆಯಿದೆ.
ಜಾಗತಿಕ ಆರ್ಥಿಕತೆ ಎದುರಿಸುತ್ತಿರುವ ಸವಾಲುಗಳು ಹಾಗೂ ಬಿಕ್ಕಟ್ಟು ಕುರಿತು ಸಭೆ ಚರ್ಚೆ ನಡೆಸುವ ಜೊತೆಗೆ ಮೂಲ ಸೌಕರ್ಯದಲ್ಲಿ ಬಂಡವಾಳ ಹೂಡಿಕೆ, ಅಂತರಾಷ್ಟ್ರೀಯ ತೆರಿಗೆ ಕುರಿತು ಸಮಾಲೋಚನೆ ನಡೆಸುವ ನಿರೀಕ್ಷೆಯಿದೆ. ಹಣಕಾಸು ಸಚಿವರು ಹಾಗೂ ಕೇಂದ್ರೀಯ ಬ್ಯಾಂಕ್ ಗೌರ್ವನರ್ ಗಳ ಸಭೆಯ ನಂತರ ಜೂನ್ 28- 29 ರಂದು ಒಸಾಕದಲ್ಲಿ ಜಿ-20 ದೇಶಗಳ ನಾಯಕರ ಸಭೆ ನಿಗದಿಯಾಗಿದೆ. ಜಿ-20 ಅಭಿವೃದ್ಧಿ ಹೊಂದುತ್ತಿರುವ ಹಾಗೂ ಹೊಂದಿದ ದೇಶಗಳ ಗುಂಪಾಗಿದ್ದು, ಭಾರತ, ಅಮೆರಿಕಾ, ಇಂಗ್ಲೆಂಡ್, ಚೈನಾ, ರಷ್ಯಾ, ಸೌದಿ ಅರೇಬಿಯಾ, ಬ್ರಿಜಿಲ್ , ಫ್ರಾನ್ಸ್ ಹಾಗೂ ಆಸ್ಟ್ರೇಲಿಯಾ ಸೇರಿದಂತೆ ಹಲವು ದೇಶಗಳು ಸದಸ್ಯ ದೇಶಗಳಾಗಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಕೊನೆಯ ಓವರ್‌ನಲ್ಲಿ ಭಾರತಕ್ಕೆ ವಿಂಡೀಸ್ ವಿರುದ್ಧ ರೋಚಕ ಜಯ: T20 ಸರಣಿಯಲ್ಲಿ 2-1 ಮುನ್ನಡೆ!

'We're Sorry': ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಬಗ್ಗೆ ತಿಳಿಸಿದ್ದ ಮಹಿಳಾ ಪೊಲೀಸ್; ಹೇಗಿತ್ತು CJP ನಾಯಕನ ಪ್ರತಿಕ್ರಿಯೆ...: ವಿಡಿಯೋ ವೈರಲ್!

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್