ಜನಾರ್ದನ ರೆಡ್ಡಿ 
ದೇಶ

6 ವರ್ಷಗಳ ನಂತರ ಜನಾರ್ದನ ರೆಡ್ಡಿ ಬಳ್ಳಾರಿಗೆ ತೆರಳಲು ಸುಪ್ರೀಂ ಕೋರ್ಟ್ ಅನುಮತಿ

ಅಕ್ರಮ ಗಣಿಗಾರಿಕೆ ಪ್ರಕರಣದ ಆರೋಪಿ, ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ಬಳ್ಳಾರಿ ಜಿಲ್ಲೆ ಪ್ರವೇಶಿಸಲು ಸುಪ್ರೀಂ ಕೋರ್ಟ್ ಶುಕ್ರವಾರ ಅನುಮತಿ...

ನವದೆಹಲಿ: ಅಕ್ರಮ ಗಣಿಗಾರಿಕೆ ಪ್ರಕರಣದ ಆರೋಪಿ, ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ಬಳ್ಳಾರಿ ಜಿಲ್ಲೆ ಪ್ರವೇಶಿಸಲು ಸುಪ್ರೀಂ ಕೋರ್ಟ್ ಶುಕ್ರವಾರ ಅನುಮತಿ ನೀಡಿದೆ. ಇದರೊಂದಿಗೆ ಆರು ವರ್ಷಗಳ ನಂತರ ಇದೇ ಮೊದಲ ಬಾರಿಗೆ ಜನಾರ್ದನ ರೆಡ್ಡಿ ತಮ್ಮ ತವರೂರು ಬಳ್ಳಾರಿಗೆ ತೆರಳಲು ಅವಕಾಶ ದೊರೆತಂತಾಗಿದೆ.
ಬಳ್ಳಾರಿ ಪ್ರವೇಶಿಸಲು ಅನುಮತಿ ಕೋರಿ ಗಣಿ ಉದ್ಯಮಿ ಜನಾರ್ದನ ರೆಡ್ಡಿ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸದ ಸುಪ್ರೀಂ ಕೋರ್ಟ್ ರಜಾಕಾಲದ ಪೀಠ, ಜೂನ್ 8ರಿಂದ ಎರಡು ವಾರಗಳ ಕಾಲ ಬಳ್ಳಾರಿಗೆ ತೆರಳಲು ಅನುಮತಿ ನೀಡಿದೆ. 
ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ನಮ್ಮ ಮಾವನನ್ನು ಬಳ್ಳಾರಿಯ ಆಸ್ಪತ್ರೆಯಲ್ಲಿ ಐಸಿಯುಗೆ ದಾಖಲಿಸಲಾಗಿದೆ. ಅವರನ್ನು ಭೇಟಿ ಮಾಡುವ ಸಲುವಾಗಿ ಬಳ್ಳಾರಿ ಪ್ರವೇಶಿಸಲು ಅನುಮತಿ ನೀಡಬೇಕು ಎಂದು ಕೋರಿ ರೆಡ್ಡಿ ಗುರುವಾರ ಅರ್ಜಿ ಸಲ್ಲಿಸಿದ್ದರು.
ಅಕ್ರಣ ಗಣಿಗಾರಿಕೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ರೆಡ್ಡಿ 2015ರಿಂದ ಜಾಮೀನಿನ ಮೇಲೆ ಹೊರಗಿದ್ದಾರೆ. ಆದರೆ ರೆಡ್ಡಿ ಯಾವುದೇ ಕಾರಣಕ್ಕೂ ಬಳ್ಳಾರಿ ಜಿಲ್ಲೆಯನ್ನು ಪ್ರವೇಶಿಸುವಂತಿಲ್ಲ ಎಂದು ಕೋರ್ಟ್ ಆದೇಶಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

'ತಂದಿಟ್ಟ ಗಿಡ ಮನೆಗೇ ಹಾನಿ ಮಾಡಿದ್ರೆ..'; 'ನೋ ಕ್ಲಾಸ್', BiggBoss ಇತಿಹಾಸದ ಅತಿದೊಡ್ಡ ನಿರ್ಧಾರದ ಸುಳಿವು ನೀಡಿದ ಕಿಚ್ಚಾ ಸುದೀಪ್

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌‌ವೇಯಲ್ಲಿ ಅಪಘಾತಕ್ಕೆ ಬಿಗ್ ಟ್ವಿಸ್ಟ್: ಸ್ನೇಹಿತನಿಂದಲೇ ಭೂಮಿಕಾ ಕೊಲೆ?

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!