ಸಂಗ್ರಹ ಚಿತ್ರ 
ದೇಶ

ಕಾಂಗ್ರೆಸ್ ದಾಖಲೆ ಧೂಳಿಪಟ ಮಾಡಿ, 2047ರವರೆಗೂ ಬಿಜೆಪಿ ಅಧಿಕಾರದಲ್ಲಿರಲಿದೆ: ರಾಮ್ ಮಾಧವ್

ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಭೂತಪೂರ್ವ ಜನಮನ್ನಣೆ ಗಳಿಸಿದ್ದು, 2047ರವರೆಗೂ ಬಿಜೆಪಿಯೇ ಅಧಿಕಾರದಲ್ಲಿರಲಿದೆ ಎಂದು ಬಿಜೆಪಿ ಮುಖಂಡ ರಾಮ್ ಮಾಧವ್ ಹೇಳಿದ್ದಾರೆ.

ನವದೆಹಲಿ: ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಭೂತಪೂರ್ವ ಜನಮನ್ನಣೆ ಗಳಿಸಿದ್ದು, 2047ರವರೆಗೂ ಬಿಜೆಪಿಯೇ ಅಧಿಕಾರದಲ್ಲಿರಲಿದೆ ಎಂದು ಬಿಜೆಪಿ ಮುಖಂಡ ರಾಮ್ ಮಾಧವ್ ಹೇಳಿದ್ದಾರೆ.
ಅಗರ್ತಲಾದಲ್ಲಿ ನಡೆದ ಬಿಜೆಪಿ ಪಕ್ಷದ ವಿಜಯಯಾತ್ರೆಯಲ್ಲಿ ಪಾಲ್ಗೊಂಡು ಮಾತನಾಡಿದ ರಾಮ್ ಮಾಧವ್, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ ಜನ ಭರವಸೆ ಇರಿಸಿದ್ದಾರೆ. ಇದೇ ಕಾರಣಕ್ಕೆ ಸತತ 2ನೇ ಬಾರಿಗೂ ಭರ್ಜರಿ ಗೆಲುವು ನೀಡಿದ್ದಾರೆ. ಮೋದಿ ಸರ್ಕಾರ ದೇಶದಲ್ಲಿನ ಕೋಮು ಸಂಘರ್ಷ, ಭ್ರಷ್ಟಾಚಾರಕ್ಕೆ ಬ್ರೇಕ್ ಹಾಕಿದ್ದು, ಬಲಿಷ್ಠ ಭಾರತದ ನಿರ್ಮಾಣ ಮಾಡುತ್ತಿದೆ. ವಿತ್ತೀಯ ಸ್ಥಿರತೆ ಸಾಧಿಸಿದೆ ಎಂದು ಹೇಳಿದ್ದಾರೆ.
ಮೋದಿ ಸರ್ಕಾರದ ಯಶಸ್ಸು ಸುದೀರ್ಘ ಅವಧಿಯವರೆಗೂ ಬಿಜೆಪಿ ಗೆಲುವಿಗೆ ಕಾರಣವಾಗಲಿದೆ. ಮೋದಿ ಅವರ ನಾಯಕತ್ವ ಮುಂದುವರೆಯಲಿದ್ದು, ಬಿಜೆಪಿ ಸರ್ಕಾರದ ನೇತೃತ್ವದಲ್ಲೇ ಭಾರತದ 100ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಿಲಿದ್ದೇವೆ. ರಾಷ್ಟ್ರೀಯತೆ ಬಿಜೆಪಿ ಡಿಎನ್ಎಯಲ್ಲೇ ಇದ್ದು, ಬಿಜೆಪಿ ಕಾಂಗ್ರೆಸ್ ನ 27 ವರ್ಷಗಳ ಕಾಲ ಸುದೀರ್ಘ ಸರ್ಕಾರದ ದಾಖಲೆಯನ್ನು ಖಂಡಿತಾ ಮುರಿಯಲಿದೆ. 2047ರಲ್ಲಿ ಬಿಜೆಪಿ ಸರ್ಕಾರವೇ ಸ್ವಾತಂತ್ರ್ಯ ದಿನಾಚರಣೆಯ ಶತಮಾನೋತ್ಸವ ಆಚರಣೆ ಮಾಡಲಿದೆ. 1950 ರಿಂದ 1977 ಕಾಂಗ್ರೆಸ್ ಅಧಿಕಾರದಲ್ಲಿತ್ತು. ಈ ದಾಖಲೆಯನ್ನು ಬಿಜೆಪಿ ಮುರಿಯಲಿದ್ದು, ಆ ಮೂಲಕ ಅತೀ ಹೆಚ್ಚು ಸಮಯ ದೇಶದಲ್ಲಿ ಸರ್ಕಾರ ನಡೆಸಿದ ಮೊದಲ ಪಕ್ಷ ಎಂಬ ದಾಖಲೆ ಬರೆಯಲಿದೆ ಎಂದು ಹೇಳಿದ್ದಾರೆ.
ಇದೇ ವೇಳೆ ಬಿಜೆಪಿ ಸೇನೆಯನ್ನು ಚುನಾವಣೆಗಾಗಿ ದುರ್ಬಳಕೆ ಮಾಡಿಕೊಂಡಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಮಾತನಾಡಿದ ರಾಮ್ ಮಾಧವ್ ಅವರು, ಬಿಜೆಪಿ ಎಂದಿಗೂ ಭಾರತೀಯ ಸೇನೆಯನ್ನು ದುರ್ಬಳಕೆ ಮಾಡಿಕೊಂಡಿಲ್ಲ. ಸೇನೆಯ ಯಶಸ್ಸನ್ನು ನಾವು ಎಂದಿಗೂ ಚುನಾವಣಾ ಗೆಲುವಿಗೆ ಬಳಸಿಕೊಂಡಿಲ್ಲ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT