ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿಗಳಾದ ಒಮರ್ ಅಬ್ದುಲ್ಲಾ ಹಾಗೂ ಮೆಹಬೂಬಾ ಮುಫ್ತಿ 
ದೇಶ

ಕಥುವಾ ಅತ್ಯಾಚಾರ ತಿರ್ಪು: ಒಮರ್, ಮೆಹಬೂಬಾ ಮುಫ್ತಿ ಸ್ವಾಗತ

ಕಥುವಾ ಅತ್ಯಾಚಾರ ಕೊಲೆ ಪ್ರಕರಣದಲ್ಲಿ ಪಠಾಣ್ ಕೋಟ್ ನ್ಯಾಯಾಲಯದ ತೀರ್ಪನ್ನು ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿಗಳಾದ ಒಮರ್ ಅಬ್ದುಲ್ಲಾ ಹಾಗೂ ಮೆಹಬೂಬಾ ಮುಫ್ತಿ ಸ್ವಾಗತಿಸಿದ್ದಾರೆ.

ಶ್ರೀನಗರ: ಕಥುವಾ ಅತ್ಯಾಚಾರ ಕೊಲೆ ಪ್ರಕರಣದಲ್ಲಿ ಪಠಾಣ್ ಕೋಟ್ ನ್ಯಾಯಾಲಯದ ತೀರ್ಪನ್ನು ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿಗಳಾದ ಒಮರ್ ಅಬ್ದುಲ್ಲಾ ಹಾಗೂ ಮೆಹಬೂಬಾ ಮುಫ್ತಿ ಸ್ವಾಗತಿಸಿದ್ದಾರೆ.
"ಅಪರಾಧಿಗಳು ಕಾನೂನಿನ ಅಡಿಯಲ್ಲಿಗಂಭೀರ ಶಿಕ್ಷೆಗೆ ಅರ್ಹರಾಗಿದ್ದಾರೆ ಮತ್ತು ಆಪಾದಿತರನ್ನು ಸಮರ್ಥಿಸಿಕೊಂಡಿದ್ದ ರಾಜಕಾರಣಿಗಳಿಗೆ ಇದರಿಂದ ತಕ್ಕ ಪಾಠ ಕಲಿತಂತಾಗಿದೆ.ಕಾನುನು ಎಲ್ಲಕ್ಕಿಂತ ದೊಡ್ಡದು" ಎಂದು ಒಮರ್ ಅಬ್ದುಲ್ಲಾ ಹೇಳಿದ್ದಾರೆ.
"ಎಂಟು ವರ್ಷದ ಬಾಲಕಿಯನ್ನು ಮಾದಕ ವ್ಯಸನಿಗಳು ಅತ್ಯಾಚಾರ ನಡೆಸಿ ಕ್ರೂರವಾಗಿ ಶಿಕ್ಷಿಸಿದ್ದರು. ನಮ್ಮ ನ್ಯಾಯಾಂಗ ವ್ಯವಸ್ಥೆಯಲ್ಲಿಲೋಪವಿಲ್ಲ ಎಂದು ಭರವಸೆ ಇಡುತ್ತೇನೆ. ಅಪರಾಧಿಗಳು ಕಠಿಣತಮ ಶಿಕ್ಷೆಗೆ ಗುರಿಯಾಗಲಿದ್ದಾರೆ"ಮೆಹಬೂಬಾ ಮುಫ್ತಿ ಹೇಳಿದ್ದಾರೆ.
ಕಳೆದ ವರ್ಷ ಜನವರಿಯಲ್ಲಿ ಕಥುವಾ ಜಿಲ್ಲೆಯ ರಸ್ನಾ ಪ್ರದೇಶದಲ್ಲಿ ಮುಸ್ಲಿಂ ಅಲೆಮಾರಿ ಜನಾಂಗದ ಎಂಟು ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆದಿದ್ದು ಬಳಿಕ ಕ್ರೂರವಾಗಿ ಕೊಂದು ಹಾಕಲಾಗಿತ್ತು.ಪ್ರಕರಣಕ್ಕೆ ಸಂಬಂಧಿಸಿ ಪ್ರಕರಣದಲ್ಲಿ ಏಳು ಆರೋಪಿಗಳ ಪೈಕಿ ಆರು ಆರೋಪಿಗಳನ್ನು ಪಠಾಣ್ ಕೋಟ್ ನ್ಯಾಯಾಲಯ ದೋಷಿಗಳೆಂದು ಘೋಷಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಹೈಡ್ರಾಮಾ: EC ಕಚೇರಿ ಮುತ್ತಿಗೆಗೆ ಯತ್ನಿಸಿದ ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿ INDIA ಒಕ್ಕೂಟದ ಹಲವು ಸಂಸದರು ಪೊಲೀಸ್ ವಶಕ್ಕೆ..!

ಹೆಲಿಕಾಪ್ಟರ್‌ನಿಂದ ಉಳಿಯುವಾಗ 2 ತಿಂಗಳ ಮಗುವಿನೊಂದಿಗೆ ಎಡವಿದ ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಪತ್ನಿ ಉಷಾ, Video

SIR ವಿವಾದ: 'ಶಾಸಕ ಯತ್ನಾಳ್ ಬಣ್ಣ ಬಯಲು'; ವಿಜಯಪುರದಲ್ಲಿ ಬದುಕಿರುವ 8 ಮುಸ್ಲಿಂ ಮತದಾರರು 'ಸತ್ತಿದ್ದಾರೆ' ಎಂದು ಅರ್ಜಿ!

ಹೀಗೂ ಉಂಟೆ?: BJP ಶಾಸಕನ ಬಂಗಲೆ ತೊಳೆಯಲು ಹೋದ ಅಗ್ನಿಶಾಮಕ ವಾಹನ; ವಿಡಿಯೋ ವೈರಲ್‌ ಬೆನ್ನಲ್ಲೇ ₹2,700 ದಂಡ!

DIG ಸೋಮಶೇಖರ್ ಕಾಮಕಾಂಡ ಬಟಾಬಯಲು: ಅಪರಾಧಿ ಪತ್ನಿಗೆ ವಿಡಿಯೋ ಕಾಲ್; ಬೆತ್ತಲಾಗುವಂತೆ ಒತ್ತಡ!