ಸಂಗ್ರಹ ಚಿತ್ರ 
ದೇಶ

17ನೇ ಲೋಕಸಭೆ: ಹಂಗಾಮಿ ಸ್ಪೀಕರ್ ಆಗಿ ಬಿಜೆಪಿ ಸಂಸದ ಡಾ. ವೀರೇಂದ್ರ ಕುಮಾರ್ ಆಯ್ಕೆ

17ನೇ ಲೋಕಸಭೆಯ ಹಂಗಾಮಿ ಸ್ಪೀಕರ್ ಆಗಿ ಬಿಜೆಪಿ ಸಂಸದ ಡಾ.ವೀರೇಂದ್ರ ಕುಮಾರ್ ಆಯ್ಕೆಯಾಗಿದ್ದಾರೆ ಎಂದು ತಿಳಿದುಬಂದಿದೆ.

ನವದೆಹಲಿ: 17ನೇ ಲೋಕಸಭೆಯ ಹಂಗಾಮಿ ಸ್ಪೀಕರ್ ಆಗಿ ಬಿಜೆಪಿ ಸಂಸದ ಡಾ.ವೀರೇಂದ್ರ ಕುಮಾರ್ ಆಯ್ಕೆಯಾಗಿದ್ದಾರೆ ಎಂದು ತಿಳಿದುಬಂದಿದೆ.
ಮಧ್ಯ ಪ್ರದೇಶದ ಟಿಕಾಮ್ ಗಢ್ ನಿಂದ 7 ಬಾರಿ ಸಂಸದರಾಗಿ ಆಯ್ಕೆಯಾಗಿರುವ ವೀರೇಂದ್ರ ಕುಮಾರ್ ಅವರನ್ನು ಇದೀಗ 17ನೇ ಲೋಕಸಭೆಯ ಸ್ಪೀಕರ್ ಆಗಿ ಆಯ್ಕೆ ಮಾಡಲಾಗಿದೆ. ಈ ಹಿಂದಿನ ಎನ್ ಡಿಎ ಸರ್ಕಾರದಲ್ಲಿ ವೀರೇಂದ್ರ ಕುಮಾರ್ ಅವರು, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ರಾಜ್ಯ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಅಲ್ಲದೆ ಅಲ್ಪ ಸಂಖ್ಯಾತರ ಖಾತೆಯ ರಾಜ್ಯ ಸಚಿವರಾಗಿಯೂ ಕರ್ತವ್ಯ ನಿರ್ವಹಿಸಿದ್ದರು.
ಪದವಿ ವಿದ್ಯಾರ್ಥಿಯಾಗಿದ್ದಾಗಲೇ ವೀರೇಂದ್ರ ಕುಮಾರ್ ಎಬಿವಿಪಿ(ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್)ನೊಂದಿಗೆ ಗುರುತಿಸಿಕೊಂಡಿದ್ದರು. ಬಳಿಕ 1996ರಲ್ಲಿ ಸಾಗರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮಧ್ಯಪ್ರಾಚ್ಯದಲ್ಲಿ ಯುದ್ಧದ ಭೀತಿ: ಷರತ್ತು ಒಪ್ಪದ ಹೊರತು ಹಾರ್ಮುಜ್ ಜಲಸಂಧಿ ತರೆಯಲ್ಲ ಎಂದ ಇರಾನ್; ದಿಗ್ಬಂಧನ ಮತ್ತಷ್ಟು ಬಿಗಿಗೊಳಿಸಿದ ಅಮೆರಿಕ..!

ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಾರ್ಮೋಡ: ‘ದೊಡ್ಡ ಘಟನೆ ನಡೆಯಲಿದೆ’ ಎಂದ ಟ್ರಂಪ್; ಇರಾನ್ ವಿರುದ್ಧ ಅಮೆರಿಕಾ ನಡೆಸಿರುವ ಗೇಮ್‌ಪ್ಲ್ಯಾನ್ ಏನು..?

ಇಂದಿನಿಂದ ವಿಧಾನಮಂಡಲ ವಿಶೇಷ ಅಧಿವೇಶನ: ಕಸ್ತೂರಿರಂಗನ್ ವರದಿ ತಿರಸ್ಕರಿಸಲು ಒಕ್ಕೊರಲ ತೀರ್ಮಾನ ಸಾಧ್ಯತೆ, ಕೇಂದ್ರಕ್ಕೆ ಶಾಕ್ ಕೊಡಲು ರಾಜ್ಯ ಸರ್ಕಾರ ಸಜ್ಜು..!

ಅಮೆರಿಕಾ ವಿರುದ್ಧ ಯುದ್ಧವಿಲ್ಲ, ಸೌದಿ ವಿರುದ್ಧ ಸಮರ ನಿಲ್ಲಲ್ಲ: ಟ್ರಂಪ್‌ಗೆ ಹೌತಿಗಳ ಖಡಕ್ ಸಂದೇಶ, ಮಧ್ಯಪ್ರಾಚ್ಯದಲ್ಲಿ ಮತ್ತೊಂದು ಯುದ್ಧದ ಆತಂಕ..!

ಕಸ್ತೂರಿರಂಗನ್ ವರದಿ ವಿರುದ್ಧ ರೈತರ ರಣಕಹಳೆ: 10 ಕಿ.ಮೀ. ನಡೆದು ಬಂದ ಸಾವಿರಾರು ಅನ್ನದಾತರು, ಸಿಎಂ ಭೇಟಿಗೆ ಪಟ್ಟು: ಬಿಸಿಲಲ್ಲೇ ಕುಳಿತು ಧರಣಿ..!