ದೇಶ

ರಾಹುಲ್ ಗಾಂಧಿ ಭೇಟಿ ಮಾಡಿದ ದೇವೇಗೌಡ: ಸಿದ್ದು ವಿರುದ್ಧ ದೂರುಗಳ ಸುರಿಮಳೆ?

Shilpa D
ನವದೆಹಲಿ: ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸೋಮವಾರ ನವದೆಹಲಿಯಲ್ಲಿ ಭೇಟಿಯಾಗಿದ್ದು ಕುತೂಹಲ ಸೃಷ್ಟಿಸಿದೆ.
ದೇವೇಗೌಡ ಅವರು ರಾಹುಲ್ ಗಾಂಧಿ ಆವರನ್ನು ಭೇಟಿ ಮಾಡಿ ರಾಜ್ಯ ಕಾಂಗ್ರೆಸ್ ನ ಕೆಲವು ನಾಯಕರ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಸರ್ಕಾರದ ಕಳಪೆ ಪ್ರದರ್ಶನಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಕಾರಣ ಎಂದು ದೇವೇಗೌಡರು ರಾಹುಲ್ ಗಾಂಧಿ ಅವರಿಗೆ ದೂರು ನೀಡಿದ್ದಾರೆ ಎನ್ನಲಾಗಿದೆ. ಸಿದ್ದರಾಮಯ್ಯ ಅವರು ಸರ್ಕಾರ ನಡೆಸಲು ಅಡ್ಡಿಪಡಿಸುತ್ತಿದ್ದಾರೆ ಎಂದು ದೂರಿದ್ದಾರೆ ಎಂದು ಹೇಳಲಾಗಿದೆ.
ಕುಮಾರ ಸ್ವಾಮಿ ಸಚಿವ ಸಂಪುಟದ ನಿರ್ಧಾರಗಳ ಬಗ್ಗೆ ಕೆಲವು ಕಾಂಗ್ರೆಸ್ ನ ಹಿರಿಯ ನಾಯಕರೇ ಟೀಕೆ ಮಾಡುತ್ತಿರುವ ಬಗ್ಗೆಯೂ ಅವರು ಬೇಸರ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ಹಿರಿಯ ನಾಯಕರಾದ ರಾಮಲಿಂಗಾ ರೆಡ್ಡಿ ಮತ್ತು ರೋಷನ್ ಬೇಗ್ ಸಂಪುಟ ವಿಸ್ತರಣೆಯ ಬಗ್ಗೆ ಬಹಿರಂಗವಾಗಿಯೇ ಅಸಮಾಧಾನದ ಹೇಳಲಿಕೆ ನೀಡಿದ್ದರ ಬಗ್ಗೆ ಕಾಂಗ್ರೆಸ್ ನಾಯಕರ ಗಮನ ಸೆಳೆದರು ಎಂದು ಮೂಲಗಳು ತಿಳಿಸಿವೆ.
SCROLL FOR NEXT