ದೇಶ

ಪ್ರಧಾನಿ ಮೋದಿ ಭೇಟಿ ಮಾಡಿದ ಪಟ್ನಾಯಕ್, ಒಡಿಶಾಗೆ ವಿಶೇಷ ಸ್ಥಾನಮಾನಕ್ಕೆ ಮನವಿ

Lingaraj Badiger
ನವದೆಹಲಿ: ಒಡಿಶಾ ನೂತನ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದು, ಒಡಿಶಾಗೆ ವಿಶೇಷ ಸ್ಥಾನಮಾನ ನೀಡುವಂತೆ ಮನವಿ ಮಾಡಿದ್ದಾರೆ.
ನವೀನ್ ಪಟ್ನಾಯಕ್ ಅವರು ಐದನೇ ಬಾರಿ ಒಡಿಶಾ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ಇಂದು ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ್ದು, ಉಭಯ ನಾಯಕರ ಭೇಟಿಯ ಚಿತ್ರವನ್ನು ಪ್ರಧಾನಿ ಕಾರ್ಯಾಲಯ ಟ್ವೀಟ್ ಮಾಡಿದೆ.
ಇತ್ತೀಚಿಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ ಎರಡನೇ ಬಾರಿ ದೇಶದ ಪ್ರಧಾನಿಯಾದ ನರೇಂದ್ರ ಮೋದಿ ಅವರನ್ನು ನಾನು ಅಭಿನಂದಿಸಿದೆ ಮತ್ತು ಇತ್ತೀಚಿನ ಚಂಡಮಾರುತದಿಂದ ತತ್ತರಿಸಿರುವ ಒಡಿಶಾಗೆ ವಿಶೇಷ ಸ್ಥಾನಮಾನ ನೀಡುವಂತೆ ಮನವಿ ಮಾಡಿದ್ದೇನೆ ಎಂದು ನವೀನ್ ಪಟ್ನಾಯಕ್ ತಿಳಿಸಿದ್ದಾರೆ.
ಲೋಕಸಭೆ ಚುನಾವಣೆ ಜತೆ ಒಡಿಶಾ ವಿಧಾನಸಭೆಗೂ ನಡೆದ ಚುನಾವಣೆಯಲ್ಲಿ ನವೀನ್ ಪಟ್ನಾಯಕ್ ನೇತೃತ್ವದ ಬಿಜೆಡಿ ಒಟ್ಟು 147 ಸ್ಥಾನಗಳ ಪೈಕಿ 112ರಲ್ಲಿ ಗೆಲುವು ಸಾಧಿಸಿದೆ. ಇದರೊಂದಿಗೆ ಪಟ್ನಾಯಕ್ ಸತತ ಐದನೇ ಬಾರಿ ಒಡಿಶಾ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.
SCROLL FOR NEXT