ದೇಶ

ಉನ್ನತ ಅಧಿಕಾರಿಗಳೊಂದಿಗೆ ಪ್ರಧಾನಿ ಮೋದಿ ಸಭೆ: ಮಹತ್ವದ ಚರ್ಚೆ

Srinivas Rao BV
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಜೂ. 10 ರಂದು ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದ್ದಾರೆ. 
ಪ್ರತಿ ಸಚಿವಾಲಯಕ್ಕೂ ಟಾರ್ಗೆಟ್ ಹಾಗೂ ಮೈಲಿಗಲ್ಲುಗಳನ್ನೊಳಗೊಂಡ ಪಂಚ ವಾರ್ಷಿಕ ಯೋಜನೆಯನ್ನು ಸಿದ್ಧಪಡಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. 
ಜನಸಾಮಾನ್ಯರ ಜೀವನ ಸುಧಾರಣೆ ಮಾಡುವುದಕ್ಕೆ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ಮೋದಿ ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ. ಈ ನಿಟ್ಟಿನಲ್ಲಿ ಪ್ರತಿ ಸಚಿವಾಲಯವೂ ಸಹ ಪರಿಣಾಮಕಾರಿ ನಿರ್ಧಾರಗಳನ್ನು ಕೈಗೊಳ್ಳಬೇಕಿದ್ದು, ಈ ನಿರ್ಧಾರಗಳಿಗೆ ಕೇಂದ್ರ ಸರ್ಕಾರ 100 ದಿನಗಳ ಒಳಗಾಗಿ ಅನುಮೋದನೆ ನೀಡಲಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. 
ದೇಶದ ಜನತೆ ಉತ್ತಮ ಗುಣಮಟ್ಟದ ಜೀವನಕ್ಕಾಗಿ ಎದುರು ನೋಡುತ್ತಿದ್ದು, ಸುಗಮ ಜೀವನ (ease of livingಓ ನಡೆಸುವ ಜನರ ಆಶೋತ್ತರಗಳನ್ನು ಈಡೇರಿಸುವ ದಿಶೆಯಲ್ಲಿ  ಸರ್ಕಾರ ಗಮನ ಕೇಂದ್ರೀಕರಿಸಬೇಕಿದೆ ಎಂದು ಮೋದಿ ಅಧಿಕಾರಿಗಳಿಗೆ ತಿಳಿಸಿದ್ದಾರೆ. 
ಇದೇ ವೇಳೆ ಭಾರತವನ್ನು 5 ಟ್ರಿಲಿಯನ್ ಆರ್ಥಿಕತೆಯನ್ನಾಗಿ ಮಾಡುವುದಕ್ಕೆ ಕೈಗೊಳ್ಳಬೇಕಿರುವ ಕ್ರಮಗಳು ಹಾಗೂ ಆ ನಿಟ್ಟಿನಲ್ಲಿ ಆಗಬೇಕಿರುವ ಕೆಲಸಗಳಿಗೆ ಚಾಲನೆ ನೀಡಲು ಮೋದಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. 
ಜನರು ತಮ್ಮ ಸರ್ಕಾರದ ಬಗ್ಗೆ ಇಟ್ಟುಕೊಂಡಿರುವ ಭಾರೀ ನಿರೀಕ್ಷೆಗಳನ್ನು ಸವಾಲು ಎಂದುಕೊಳ್ಳದೇ, ಅವಕಾಶ ಎಂದು ಪರಿಗಣಿಸಬೇಕೆಂದು ಮೋದಿ ಇದೇ ವೇಳೆ ಅಧಿಕಾರಿಗಳಿಗೆ ಸಲಹೆ ನೀಡಿದ್ದಾರೆ. 
SCROLL FOR NEXT