ದೇಶ

'ಹಿಂದಿ ಅಥವಾ ಇಂಗ್ಲಿಷ್ ಮಾತ್ರ ಮಾತನಾಡಿ' ಸುತ್ತೋಲೆ ಹಿಂಪಡೆದ ದಕ್ಷಿಣ ರೈಲ್ವೆ

Lingaraj Badiger
ಚೆನ್ನೈ: ತಮಿಳುನಾಡಿನಲ್ಲಿ ಪ್ರತಿಪಕ್ಷಗಳ ತೀವ್ರ ಪ್ರತಿಭಟನೆಯ ನಂತರ ಎಚ್ಚೆತ್ತುಕೊಂಡ ದಕ್ಷಿಣ ರೈಲ್ವೆ, ಅಧಿಕಾರಿಗಳು 'ಹಿಂದಿ ಅಥವಾ ಇಂಗ್ಲಿಷ್ ಮಾತ್ರ ಮಾತನಾಡಿ' ಎಂದು ಹೊರಡಿಸಿದ್ದ ಸುತ್ತೋಲೆಯನ್ನು ಶುಕ್ರವಾರ ಹಿಂಪಡೆಯಲಾಗಿದೆ.
ಜೂನ್ 12ರಂದು ವಿಭಾಗೀಯ ನಿಯಂತ್ರಣ ಕಚೇರಿ ಮತ್ತು ಸ್ಟೇಷನ್ ಮಾಸ್ಟರ್ ಗಳಿಗೆ ಹಿಂದಿ ಅಥವಾ ಇಂಗ್ಲಿಷ್ ನಲ್ಲಿ ಮಾತ್ರ ಮಾತನಾಡಬೇಕು ಎಂದು ಸುತ್ತೋಲೆ ಹೊರಡಿಸಲಾಗಿತ್ತು.
ಈ ಸುತ್ತೋಲೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದ ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು, ಇದು ಸೊಕ್ಕಿನ ವರ್ತನೆಯಾಗಿದ್ದು, ರೈಲ್ವೆ ತನ್ನ ಅಧಿಕಾರಿಗಳನ್ನು ಹೆದರಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.
ಜೂನ್ 12ರಂದು ಮುಖ್ಯ ಸಾರಿಗೆ ಯೋಜನಾ ವ್ಯವಸ್ಥಾಪಕ(ಸಿಟಿಪಿಎಂ) ಆರ್ ಶಿವ ಅವರು, ವಿಭಾಗೀಯ ನಿಯಂತ್ರಣ ಕಚೇರಿ ಮತ್ತು ಸ್ಟೇಷನ್ ಮಾಸ್ಟರ್ ಗಳ ನಡುವಿನ ಸಂಭಾಷಣೆ ಹಿಂದಿ ಅಥವಾ ಇಂಗ್ಲಿಷ್ ನಲ್ಲಿರಬೇಕು. ಪ್ರಾದೇಶಿಕ ಭಾಷೆ ಬಳಸುವುದನ್ನು ತಪ್ಪಿಸಬೇಕು ಎಂದು ಸುತ್ತೋಲೆ ಹೊರಡಿಸಿದ್ದರು.
SCROLL FOR NEXT