ದೇಶ

ರಾಜ್ಯದ ನೀರಾವರಿ ಯೋಜನೆಗಳಿಗೆ ಅನುಮತಿ ನೀಡುವಂತೆ ಕೇಂದ್ರ ಜಲಶಕ್ತಿ ಸಚಿವರಿಗೆ ಮುಖ್ಯಮಂತ್ರಿ ಮನವಿ

Nagaraja AB
ಬೆಂಗಳೂರು: ಮಹದಾಯಿ ಹಾಗೂ ಕೃಷ್ಣಾ ನ್ಯಾಯಾಧೀಕರಣದ ತೀರ್ಪಿನ ಗೆಜೆಟ್ ಅಧಿಸೂಚನೆ ಹೊರಡಿಸಿರುವ  ಬಗ್ಗೆ ಸಂಬಂಧಿಸಿದ ರಾಜ್ಯಗಳ ಸಚಿವರ ಸಭೆ ಕರೆದು ಚರ್ಚಿಸುವುದಾಗಿ ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿಗೆ ಭರವಸೆ ನೀಡಿದ್ದಾರೆ.
ದೆಹಲಿಯ ಜಲಭವನದಲ್ಲಿ ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿಯಾದ ಮುಖ್ಯಮಂತ್ರಿ ಕುಮಾರಸ್ವಾಮಿ, ರಾಜ್ಯದ ವಿವಿಧ ನೀರಾವರಿ ಯೋಜನೆಗಳ ಕುರಿತು ಚರ್ಚೆ ನಡೆಸಿದರು.
ಮೇಕೆದಾಟು ಅಣೆಕಟ್ಟು ನಿರ್ಮಾಣ ಯೋಜನೆಗೆ ಅನುಮತಿ ನೀಡುವಂತೆ ಹಾಗೂ ಕೃಷ್ಣಾ ನ್ಯಾಯಾಧೀಕರಣದ ಆದೇಶ, ಮಹದಾಯಿ ನ್ಯಾಯಾಧೀಕರಣದ ಆದೇಶಗಳ ಗೆಜೆಟ್ ಅಧಿಸೂಚನೆ ಹೊರಡಿಸಿ, ಶೀಘ್ರವೇ ಈ ಯೋಜನೆಗಳ ಅನುಷ್ಠಾನಕ್ಕೆ ಅನುವು ಮಾಡಿಕೊಡುವಂತೆ ಮನವಿ ಮಾಡಿದ್ದಾರೆ.
ಕಾವೇರಿ ಜಲ ವಿವಾದ ನ್ಯಾಯಾಧೀಕರಣದ ಹಂಚಿಕೆಗೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಕಾವೇರಿ ಜಲನಯನ ಪ್ರದೇಶದ ರಾಜ್ಯಗಳು ಪ್ರಕರಣಗಳನ್ನು ದಾಖಲಿಸಿದ್ದಾಗ್ಯೂ,ನ್ಯಾಯಾಲಯದ ಅಂತಿಮ ತೀರ್ಪಿಗೆ ಒಳಪಡುವ ಷರತ್ತು ವಿಧಿಸಿ, ಗೆಜೆಟ್ ಅಧಿಸೂಚನೆ ಹೊರಡಿಸಲಾಗಿತ್ತು.
ಅದೇ ರೀತಿ ಕೃಷ್ಣಾ ಹಾಗೂ ಮಹದಾಯಿ ನ್ಯಾಯಾಧೀಕರಣಗಳ ನೀರು ಹಂಚಿಕೆ ಕುರಿತಂತೆ ನ್ಯಾಯಾಲಯದ ತೀರ್ಪು ನಿರೀಕ್ಷಿಸಿ, ಗೆಜೆಟ್ ಅಧಿಸೂಚನೆ ಹೊರಡಿಸುವಂತೆ ಮನವಿ ಮಾಡಿದರು.
SCROLL FOR NEXT