ಪ್ರಧಾನಿ ಮೋದಿ 
ದೇಶ

ಭಾರತವನ್ನು 5 ಟ್ರಿಲಿಯನ್ ಡಾಲರ್ ಆರ್ಥಿಕತೆಯನ್ನಾಗಿ ಮಾಡುವುದು ಸವಾಲು, ಆದರೆ ಸಾಧಿಸಬಹುದು: ಪ್ರಧಾನಿ

ಭಾರತವನ್ನು 5 ಟ್ರಿಲಿಯನ್ ಡಾಲರ್ ಆರ್ಥಿಕತೆಯನ್ನಾಗಿ ಮಾಡುವುದು ಸವಾಲು, ಆದರೆ ರಾಜ್ಯಗಳ ಪ್ರಯತ್ನದಿಂದ ಸಾಧಿಸಬಹುದು ಎಂದು...

ನವದೆಹಲಿ: ಭಾರತವನ್ನು 5 ಟ್ರಿಲಿಯನ್ ಡಾಲರ್ ಆರ್ಥಿಕತೆಯನ್ನಾಗಿ ಮಾಡುವುದು ಸವಾಲು, ಆದರೆ  ರಾಜ್ಯಗಳ ಪ್ರಯತ್ನದಿಂದ ಸಾಧಿಸಬಹುದು ಎಂದು ಪ್ರಧಾನಿ ನರೇಂದ್ರ ಮೋದಿ ಇಂದು ನಡೆದ ಐದನೇ ನೀತಿ ಆಯೋಗದ ಸಭೆಯಲ್ಲಿ ಹೇಳಿದ್ದಾರೆ.
ಸಾಬ್ ಕಾ ಸಾಥ್, ಸಾಬ್ ಕಾ ವಿಕಾಸ್,  ಸಬ್ ಕಾ ವಿಶ್ವಾಸ್  ಘೋಷಣೆ ಪೂರ್ಣಗೊಳಿಸುವಲ್ಲಿ ನೀತಿ ಆಯೋಗ ಪ್ರಮುಖ ಪಾತ್ರ ವಹಿಸುತ್ತದೆ ಎಂದು ನರೇಂದ್ರ ಮೋದಿ  ಅಭಿಪ್ರಾಯಪಟ್ಟಿದ್ದಾರೆ.
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ತೆಲಂಗಾಣದ ಮುಖ್ಯಮಂತ್ರಿ  ಕೆ. ಚಂದ್ರಶೇಖರ್ ರಾವ್ ಹೊರತುಪಡಿಸಿದಂತೆ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ಕೇಂದ್ರದ ಹಿರಿಯ ಸಚಿವರುಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.
ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವಕ್ಕೆ ಇತ್ತೀಚಿಗೆ ನಡೆದ ಚುನಾವಣೆಯನ್ನು ನೆನಪಿಸಿಕೊಂಡ ನರೇಂದ್ರ ಮೋದಿ, ದೇಶದ ಅಭಿವೃದ್ಧಿಗಾಗಿ ಎಲ್ಲರೂ ಕಾರ್ಯನಿರ್ವಹಿಸಬೇಕಾದ ಸಮಯ ಇದಾಗಿದೆ. ಬಡತನ, ನಿರುದ್ಯೋಗ, ಬರ, ಪ್ರವಾಹ, ಮಾಲಿನ್ಯ, ಭ್ರಷ್ಟಾಚಾರ ಹಾಗೂ ಹಿಂಸೆಯ ವಿರುದ್ಧ ಒಗ್ಗಟ್ಟಾಗಿ ಹೋರಾಟ ನಡೆಸಬೇಕಾಗಿದೆ ಎಂದು ತಿಳಿಸಿದರು.
2024ರೊಳಗೆ ಭಾರತವನ್ನು 5 ಟ್ರಿಲಿಯನ್ ಡಾಲರ್ ಆರ್ಥಿಕತೆಯನ್ನಾಗಿ ಮಾಡುವುದು ಸವಾಲು, ಆದರೆ ಸಾಧಿಸಬಹುದು ಎಂದು ಹೇಳಿದ ಮೋದಿ,  ರಾಜ್ಯಗಳು ತಮ್ಮ ಪ್ರಮುಖ ಸಾಮರ್ಥ್ಯವನ್ನು ಗುರುತಿಸಬೇಕು ಮತ್ತು ಜಿಡಿಪಿ ಗುರಿಗಳನ್ನು ಜಿಲ್ಲಾ ಮಟ್ಟದಿಂದಲೇ ಹೆಚ್ಚಿಸುವ ಕೆಲಸ ಮಾಡಬೇಕು ಎಂದು ಕರೆ ನೀಡಿದರು.
ಬರ ಪರಿಸ್ಥಿತಿಗಾಗಿ  ಹೆಚ್ಚಿಗೆ ಬೆಳೆ ಬೆಳೆಯುವ ಕಾರ್ಯತಂತ್ರ ಅಳವಡಿಸಿಕೊಳ್ಳುವ ಮೂಲಕ ಬರ ಪರಿಸ್ಥಿತಿಯನ್ನು ನಿವಾರಿಸಬೇಕು. ನೀರಿನ ಸಂರಕ್ಷಣೆ ಹಾಗೂ ನಿರ್ವಹಣೆಗಾಗಿ ನೂತನವಾಗಿ ಸೃಷ್ಟಿಸಲಾಗಿರುವ ಜಲ ಶಕ್ತಿ ಸಚಿವಾಲಯ ನೆರವು ನೀಡಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸಭೆಯಲ್ಲಿ ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT