ದೇಶ

ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

Sumana Upadhyaya
ಶ್ರೀನಗರ: ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಸೋಮವಾರ ನಸುಕಿನ ಜಾವ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ.
ಉಗ್ರರ ಇರುವಿಕೆ ಬಗ್ಗೆ ಮಾಹಿತಿ ಪಡೆದ ರಾಜ್ಯ ಪೊಲೀಸ್ ಸಿಬ್ಬಂದಿಯ ವಿಶೇಷ ಕಾರ್ಯಪಡೆ ಮತ್ತು ರಾಷ್ಟ್ರೀಯ ರೈಫಲ್ಸ್ ತಂಡ ಅಚಬಲ್ ಪ್ರದೇಶದ ಬಿದೂರ ಗ್ರಾಮವನ್ನು ಸುತ್ತುವರಿದರು. ಆಗ ಅವಿತು ಕುಳಿತಿದ್ದ ಉಗ್ರರು ಗುಂಡಿನ ದಾಳಿ ನಡೆಸಲಾರಂಭಿಸಿದರು. 
ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಹತರಾಗಿದ್ದು ಅವರ ಶವಗಳನ್ನು ಹೊರತೆಗೆಯಲಾಗಿದೆ. ಉಗ್ರರ ನಿಖರ ಗುರುತು ಸಿಕ್ಕಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ನಂತರ ಸಹ ಕೆಲ ಸಮಯ ಗುಂಡಿನ ದಾಳಿ ಮುಂದುವರಿದಿತ್ತು.
SCROLL FOR NEXT