ಸಂಗ್ರಹ ಚಿತ್ರ 
ದೇಶ

ಅನಂತ್ ನಾಗ್ ಎನ್ಕೌಂಟರ್: ಸೇನೆಯ ಗುಂಡಿಗೆ ಇಬ್ಬರು ಉಗ್ರರು ಹತ, ಓರ್ವ ಯೋಧ ಹುತಾತ್ಮ!

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರು ಅಟ್ಟಹಾಸ ಮೆರೆದಿದ್ದು, ಉಗ್ರರ ದಾಳಿಯಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದಾರೆ. ಅಂತೆಯೇ ಸೇನೆಯ ಗುಂಡಿಗೆ ಇಬ್ಬರು ಉಗ್ರರು ಹತರಾಗಿದ್ದಾರೆ.

ಶ್ರೀನಗರ​: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರು ಅಟ್ಟಹಾಸ ಮೆರೆದಿದ್ದು, ಉಗ್ರರ ದಾಳಿಯಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದಾರೆ. ಅಂತೆಯೇ ಸೇನೆಯ ಗುಂಡಿಗೆ ಇಬ್ಬರು ಉಗ್ರರು ಹತರಾಗಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಬಿಜ್ಬಿಹಾರ ಪಟ್ಟಣದ ಸಮೀಪವಿರುವ ಮರ್ಹಮಾ ಸಂಗಮ್ ಗ್ರಾಮದಲ್ಲಿ ಇಂದು ಮುಂಜಾನೆ ಭದ್ರತಾಪಡೆಗಳು ಉಗ್ರರ ವಿರುದ್ಧ ಕಾರ್ಯಾಚರಣೆ ಮುಂದುವರೆಸಿವೆ. ಈ ವೇಳೆ ಯೋಧರೊಬ್ಬರು ಹುತಾತ್ಮರಾಗಿದ್ದಾರೆ. 
ಇಬ್ಬರು ಅಥವಾ ಮೂವರು ಉಗ್ರರು ಅಡಗಿಕೊಂಡಿರುವ ಖಚಿತ ಮಾಹಿತಿ ಮೇರೆಗೆ ಮನೆಯೊಂದನ್ನು ಸುತ್ತುವರಿದ ಭದ್ರತಾಪಡೆ ಸಿಬ್ಬಂದಿ ಶರಣಾಗುವಂತೆ ಉಗ್ರರಿಗೆ ಸೂಚಿಸಿದರು. ಆದರೆ, ಉಗ್ರರು ಗುಂಡಿನ ದಾಳಿ ನಡೆಸಿದ್ದರಿಂದ, ಭದ್ರತಾಪಡೆಗಳು ಪ್ರತಿದಾಳಿ ಮಾಡಿದ್ದಾರೆ. ಈ ವೇಳೆ ಸೇನೆಯ ಗುಂಡಿಗೆ ಇಬ್ಬರು ಉಗ್ರರು ಸಾವನ್ನಪ್ಪಿದ್ದು, ಘಟನಾ ಪ್ರದೇಶದಲ್ಲಿ ಇನ್ನೂ ಉಗ್ರರು ಅಡಗಿರುವ ಸಾಧ್ಯತೆ ಇದೆ. ಹೀಗಾಗಿ ಸೇನೆ ಶೋಧ ಕಾರ್ಯಾಚರಣೆ ನಡೆಸಿದೆ.
ಇನ್ನು ನಿನ್ನೆ ನಡೆದ ಕಾರ್ಯಾಚರಣೆಯಲ್ಲಿ ಮೇಜರ್ ಒಬ್ಬರು​ ಹುತಾತ್ಮರಾಗಿದ್ದರು. ಈ ಘಟನೆಯಲ್ಲಿ ಒಬ್ಬ ಅಧಿಕಾರಿ ಹಾಗೂ ಇಬ್ಬರು ಯೋಧರು ಗಂಭೀರವಾಗಿ ಗಾಯಗೊಂಡಿದ್ದರು. ಈ ಘಟನೆ ಬೆನ್ನಲ್ಲೇ ಇಂದು ಮತ್ತೋರ್ವ ಸೈನಿಕ ಹುತಾತ್ಮರಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!