ಆರೋಗ್ಯ, ದೀರ್ಘಾಯಸ್ಸು ಕೋರಿ ರಾಹುಲ್ ಗಾಂಧಿಗೆ ಪ್ರಧಾನಿ ಮೋದಿಯಿಂದ ಹುಟ್ಟುಹಬ್ಬದ ಶುಭಾಶಯ
ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಗೆ ಬುಧವಾರ ಹುಟ್ಟುಹಬ್ಬದ ಶುಭಾಶಯ ...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಗೆ ಬುಧವಾರ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ.
ರಾಹುಲ್ ಗಾಂಧಿಯವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಅವರಿಗೆ ದೇವರು ದೀರ್ಘಾಯಸ್ಸು, ಆರೋಗ್ಯ ನೀಡಲಿ ಎಂದು ಹಾರೈಸಿ ಟ್ವೀಟ್ ಮಾಡಿದ್ದಾರೆ.
1970ನೇ ಇಸವಿ ಜೂನ್ 19ರಂದು ರಾಹುಲ್ ಗಾಂಧಿ ಜನಿಸಿದ್ದರು. ಈ ಇಬ್ಬರೂ ನಾಯಕರು ಇತ್ತೀಚಿನ ಲೋಕಸಭೆ ಚುನಾವಣೆಯಲ್ಲಿ ತೀವ್ರ ವಾಗ್ದಾಳಿ ನಡೆಸುತ್ತಿದ್ದರು. ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ ಅಧಿಕಾರಕ್ಕೆ ಬಂದಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.