ದೇಶ

ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ: ಒಂದು ಹತ್ಯೆ, ಮೂವರು ಗಾಯ

Nagaraja AB
ಕೊಲ್ಕತ್ತಾ: ಪಶ್ಚಿಮ ಬಂಗಾಳ ರಾಜ್ಯದ ಉತ್ತರ 24 ಪರಗಣ ಜಿಲ್ಲೆಯ ಭಾತ್ ಪಾರಾ ಪ್ರದೇಶದಲ್ಲಿ ಎರಡು ಗುಂಪುಗಳ ನಡುವೆ ಸಂಭವಿಸಿದ ಹಿಂಸಾಚಾರದಲ್ಲಿ ಒಬ್ಬರನ್ನು ಶೂಟ್ ಮಾಡಿ ಹತ್ಯೆ ಮಾಡಲಾಗಿದ್ದು, ಮೂವರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಮೃತನನ್ನು ರಂಬಾಬಾಬು ಷಾ ಎಂದು ಗುರುತಿಸಲಾಗಿದೆ. ಈ ನಡುವೆ ಗಾಯಗೊಂಡವರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ ಎಂದು ಅವರು ಹೇಳಿದ್ದಾರೆ.
ಇಂದು ಉದ್ಘಾಟನೆಯಾಗಬೇಕಿದ್ದ ನೂತನ ಪೊಲೀಸ್ ಠಾಣೆ ಮುಂಭಾಗ ಜಮಾಯಿಸಿದ್ದ ಎರಡು ಗುಂಪುಗಳು ಗಾಳಿಯಲ್ಲಿ ಗುಂಡು ಹಾರಿಸಿದ್ದು, ಬಾಂಬ್ ಗಳನ್ನು ಎಸೆದಿರುವ ಬಗ್ಗೆ ವರದಿಯಾಗಿದೆ.
ಪೊಲೀಸ್ ಅಧಿಕಾರಿಗಳ ಜೊತೆಗೆ ಕ್ಷಿಪ್ರ ಕಾರ್ಯಪಡೆ ಸಿಬ್ಬಂದಿಯನ್ನು ಆ ಪ್ರದೇಶದಲ್ಲಿ ಮಾರುಕಟ್ಟೆ, ಅಂಗಡಿಗಳ ಬಳಿ ನಿಯೋಜಿಸಲಾಗಿದೆ. 
ಮೇ 19ರಿಂದಲೂ ಭಾತ್ ಪಾರಾ ಪ್ರದೇಶದಲ್ಲಿ ಸರಣಿ ಹಿಂಸಾಚಾರದ ಘಟನೆಗಳು ನಡೆಯುತ್ತಲೇ ಇವೆ. 
SCROLL FOR NEXT