ದೇಶ

ಪ್ರಧಾನಿಗೆ ಪತ್ರ ಬರೆದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು!

Srinivas Rao BV
ನವದೆಹಲಿ: ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ರಂಜನ್ ಗೋಗೋಯ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಹೈಕೋರ್ಟ್ ನ್ಯಾಯಮೂರ್ತಿಗಳ ನಿವೃತ್ತಿ ವಯಸ್ಸನ್ನು 65 ಕ್ಕೆ ಏರಿಕೆ ಮಾಡುವುದು ಹಾಗೂ ನ್ಯಾಯಾಧೀಶರ ಸಂಖ್ಯೆಯನ್ನು ಹೆಚ್ಚಳ ಮಾಡುವುದಕ್ಕೆ ಕೇಳಿದ್ದಾರೆ 
ಹಲವು ವರ್ಷಗಳಿಂದ ಬಾಕಿ ಉಳಿದಿರುವ ಪ್ರಕರಣಗಳನ್ನು ಇತ್ಯರ್ಥಗೊಳಿಸಲು ಸಂವಿಧಾನದ ಆರ್ಟಿಕಲ್ 128 ಹಾಗೂ 224A ಅಡಿಯಲ್ಲಿ ನಿವೃತ್ತ ನ್ಯಾಯಾಧೀಶರುಗಳನ್ನು ಅಧಿಕಾರಾವಧಿಯ ನೇಮಕಾತಿ ಮಾಡಬೇಕೆಂದೂ ಪತ್ರದಲ್ಲಿ ಕೇಳಿದ್ದಾರೆ. 
ನ್ಯಾ. ರಂಜನ್ ಗೊಗೋಯ್ ಅವರು 58,669 ಪ್ರಕರಣಗಳು ಬಾಕಿ ಇದ್ದು, ಹೊಸ ಪ್ರಕರಣಗಳು ಹೆಚ್ಚಾಗುತ್ತಿರುವಂತೆ ಬಾಕಿ ಇರುವ ಪ್ರಕರಣಗಳ ಸಂಖ್ಯೆಯೂ ಏರಿಕೆಯಾಗಿದೆ ಎಂದು ಹೇಳಿದ್ದಾರೆ. 
SCROLL FOR NEXT